Breaking News

ಮಹಿಳೆ ಕಿಡ್ನಾಪ್ ಕೇಸ್ : ಆರೋಪಿ ಸತೀಶ್ ಬಾಬು 8 ದಿನ ‘SIT’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

Spread the love

ಬೆಂಗಳೂರು : ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಾಸಕ ಎಚ್ ಡಿ ರೇವಣ್ಣ ಅವರನ್ನು ಬಂಧಿಸಲಾಗಿದ್ದು ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಆರೋಪಿಯಾಗಿರುವ ಭವಾನಿ ರೇವಣ್ಣ ಸಂಬಂಧಿಯಾಗಿರುವ ಸತೀಶ್ ಭಾವವನ್ನು ಇದೀಗ ಎಂಟು ದಿನಗಳ ಕಾಲ ಎಸ್ ಐ ಟಿ ಕಸ್ಟಡಿಗೆ ನೀಡಿ ಬೆಂಗಳೂರಿನ 17ನೇ ಎಸಿ ಎಂ ಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

ಹೌದು ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಎಸ್‌ಐಟಿ ಸತೀಶ್ ಬಾಬು ಕಸ್ಟಡಿಗೆ ನೀಡಿ ಎಂದು ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಮೇ 13 ರವರೆಗೆ ಆರೋಪಿ ಸತೀಶ್ ಬಾಬು ಎಸ್ ಐ ಟಿ ಕಸ್ಟಡಿಗೆ ನೀಡಿ ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯ ಈ ಕುರಿತು ಆದೇಶ ಹೊರಡಿಸಿದೆ.

ಆರೋಪಿ ಸತೀಶ್ ಬಾಬುಗೆ ಎಂಟು ದಿನ ಎಸ್‌ಐಟಿ ವಶಕ್ಕೆ ನೀಡಿ ಆದೇಶ ಹೊರಡಿಸಿದೆ. ಮಹಿಳೆ ಅಪಹರಣ ಪ್ರಕರಣದಲ್ಲಿ ಸತೀಶ್ ಬಾಬುನನ್ನು ಬಂಧಿಸಲಾಗಿತ್ತು. ಈ ಕುರಿತಂತೆ ಎಸ್‌ಐಟಿ ಕೋರ್ಟ್ ಗೆ ಹಾಜರುಪಡಿಸಿ ಕಸ್ಟಡಿಗೆ ನೀಡಿ ಎಂದು ಮನವಿ ಮಾಡಿತ್ತು ಎನ್ನಲಾಗಿದೆ. ಹಾಗಾಗಿ ಸತೀಶ್ ಬಾಬು ಅನ್ನು ಮೇ 13ರ ವರೆಗೆ ಅಂದರೆ ಎಂಟು ದಿನಗಳ ಕಾಲ ಎಸ್ ಐ ಟಿ ಕಸ್ಟಡಿಗೆ ನೀಡಿದೆ.


Spread the love

About Laxminews 24x7

Check Also

ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ

Spread the love ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ ಒಂದು ದಿನ ಪಾರ್ವತಿ ದೇವಿಯು ಕೈಲಾಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ