Breaking News

ಸ್ವಂತ ಹಣದಲ್ಲಿ ಸಾರ್ವಜನಿಕ ರಸ್ತೆ ರಿಪೇರಿ ಮಾಡಿಸಿದ ವಿನೋದ್ ರಾಜ್

Spread the love

ಬೆಂಗಳೂರು: ವಿನೋದ್ ರಾಜ್ ಅವರು ಸ್ವಂತ ಹಣದಲ್ಲಿ ರಸ್ತೆ ಗುಂಡಿ ಮುಚ್ಚುವ ಕೆಲಸ ಮಾಡುತ್ತಿದ್ದಾರೆ. ಇತ್ತೀಚೆಗೆ ರೈತರ ಹಸುಗಳಿಗೆ ಹುಲ್ಲು ನೀಡಿದ್ದರು. ಇದೀಗ ರಸ್ತೆ ಗುಂಡಿ ಮುಚ್ಚುವ ಕಾರ್ಯಕ್ಕೆ ಎಲ್ಲರೂ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ನೆಲಮಂಗಲದ ಕರೆಕಲ್ ಕ್ರಾಸ್​ನಿಂದ ಸೋಲದೇವನಹಳ್ಳಿವರೆಗೆ ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡುತ್ತಿದ್ದಾರೆ.ಮಳೆ ಬರುವ ಸಂದರ್ಭದಲ್ಲಿ ನೀರು ನಿಂತು ವಾಹನಗಳ ಓಡಾಟಕ್ಕೆ ತೊಂದರೆ ಆಗುತ್ತಿತ್ತು. ಇದನ್ನು ತಪ್ಪಿಸಲು ವಿನೋದ್ ರಾಜ್ ಅವರು ಸ್ವಂತ ಹಣ ಖರ್ಚು ಮಾಡಿ ರಸ್ತೆ ರಿಪೇರಿ ಕಾರ್ಯ ಮಾಡುತ್ತಿದ್ದಾರೆ.

 

ನಟ ವಿನೋದ್ ರಾಜ್ ಅವರು ಇತ್ತೀಚೆಗೆ ನಟನೆಯಲ್ಲಿ ಅಷ್ಟಾಗಿ ಆಯಕ್ಟೀವ್ ಆಗಿಲ್ಲ. ಆದಾಗ್ಯೂ ಅವರು ಆಗಾಗ ಸುದ್ದಿ ಆಗುತ್ತಲೇ ಇರುತ್ತಾರೆ. ಇದಕ್ಕೆ ಕಾರಣವಾಗಿರೋದು ಅವರ ಸಾಮಾಜಿಕ ಸೇವೆ. ಈಗ ನೀರಿಲ್ಲದೆ ಎಲ್ಲ ಕಡೆ ಹಾಹಾಕಾರ ಶುರುವಾಗಿದೆ. ಹೀಗಾಗಿ ರೈತರ ಹಸುಗಳಿಗೆ ಹುಲ್ಲು ನೀಡಿದ್ದರು.


Spread the love

About Laxminews 24x7

Check Also

ಗೌರಿ ಹುಣ್ಣಿಮೆಯಿಂದ ಛಟ್ಟಿ ಅಮವಾಸ್ಯೆವರೆಗೆ ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡಕ್ಕೆ ಹುಬ್ಬಳ್ಳಿಯಿಂದ ವಿಶೇಷ ಬಸ್​ ವ್ಯವಸ್ಥೆ

Spread the love ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಸವದತ್ತಿ ರೇಣುಕಾ ಯಲ್ಲಮ್ಮದೇವಿ ದರ್ಶನ ತೆರಳುವ ಭಕ್ತಾದಿಗಳು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ