ಬೆಂಗಳೂರು, ಮೇ. 06 : ಆರು ತಿಂಗಳ ಕಾಲ ಸುದೀರ್ಘವಾದ ಒಣಹವೆಯನ್ನು ಅನುಭವಿಸಿರುವ ರಾಜ್ಯದಲ್ಲಿ ಕಳೆದ ವಾರದದಿಂದ ಮಳೆ ಬಂದಿದ್ದು, ತಾಪಮಾನ ಸುಧಾರಿಸಿದೆ. ಬೆಂಗಳೂರಿನಲ್ಲಿಯೂ ಇತ್ತೀಚೆಗೆ ಎರಡು ದಿನಗಳ ಕಾಲ ಸುರಿದ ಮಳೆಗೆ ಬಿಸಿಲು ಕೊಂಚ ಕಡಿಮೆಯಾಗಿದೆ. ಸ್ದಯ ಮುಂದಿನ ಐದು ದಿನಗಳು ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಭಾರತದ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ ದೇಶದಾದ್ಯಂತ ಹಲವಾರು ರಾಜ್ಯಗಳಲ್ಲಿ ಭಾನುವಾರ ಕೂಡ ತೀವ್ರ ತಾಪಮಾನವಿತ್ತು. ಕೆಲವು ಪ್ರದೇಶಗಳಲ್ಲಿ ತಾಪಮಾನವು 45 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಾಗಿತ್ತು. ಪಶ್ಚಿಮ ಬಂಗಾಳ, ತಮಿಳುನಾಡು, ಒಡಿಶಾ ಮತ್ತು ಜಾರ್ಖಂಡ್‌ನ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 5 ರಿಂದ 7 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ. ದೆಹಲಿಯಲ್ಲಿ ಗರಿಷ್ಠ ತಾಪಮಾನ 41.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಈ ವಾರ ರಾಜ್ಯದಲ್ಲಿ ಉತ್ತಮ ಮಳೆ
ಮೇ 5 ರಿಂದ ಮೇ 7 ರವರೆಗೆ ಮಧ್ಯ ಕರ್ನಾಟಕದ ಪ್ರದೇಶಗಳಲ್ಲಿ ಮಳೆಯಾಗಲಿದೆ. ಮೇ 6 ರಿಂದ ಮೇ 10 ರವರೆಗೆ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿಯೂ ಮುಂದಿನ ಎರಡು ವಾರಗಳ ಕಾಲ ಸಾಧಾರಣ ಮಳೆಯಾಗಲಿದೆ. ಇದರ ಜೊತೆಗೆ ಹಲವು ಕಡೆಗಳಲ್ಲಿ ಶಾಖದ ಅಲೆ ಹೆಚ್ಚಿರಲಿದೆ.
Laxmi News 24×7