Breaking News
Home / Uncategorized / ಹುಬ್ಬಳ್ಳಿ| ಸೆಂಟ್ರಲ್ ಕ್ಷೇತ್ರ: 260 ಮತಗಟ್ಟೆ, 1,244 ಸಿಬ್ಬಂದಿ

ಹುಬ್ಬಳ್ಳಿ| ಸೆಂಟ್ರಲ್ ಕ್ಷೇತ್ರ: 260 ಮತಗಟ್ಟೆ, 1,244 ಸಿಬ್ಬಂದಿ

Spread the love

ಹುಬ್ಬಳ್ಳಿ: ಹು-ಧಾ ಸೆಂಟ್ರಲ್‌ ಮತ್ತು ಪೂರ್ವ ವಿಧಾನ ಸಭಾ ಕ್ಷೇತ್ರದಲ್ಲಿ ಲೋಕಸಭಾ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಸಿಬ್ಬಂದಿ ಸೋಮವಾರ ಇವಿಎಂ, ವಿ.ವಿ.ಪ್ಯಾಟ್‌ಗಳೊಂದಿಗೆ ಮತಗಟ್ಟೆಗಳಿಗೆ ತೆರಳಿದರು.

ಹುಬ್ಬಳ್ಳಿಯ ಲ್ಯಾಮಿಂಗ್ಟನ್‌ ಶಾಲೆಯ ಮಸ್ಟರಿಂಗ್ ಸೆಂಟರ್‌ನಲ್ಲಿ ಸಿಬ್ಬಂದಿಗೆ ಮತಯಂತ್ರ ಬಳಕೆ ಬಗ್ಗೆ ಮಾಹಿತಿ ನೀಡಲಾಯಿತು.

ಚುನಾವಣಾಧಿಕಾರಿಯೂ ಆದ ಹು-ಧಾ ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಮಾಹಿತಿ ನೀಡಿ, ‘ಸೆಂಟ್ರಲ್‌ ಕ್ಷೇತ್ರದಲ್ಲಿ 260 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಅದರಲ್ಲಿ 9 ವಿಶೇಷ, ತಲಾ ಒಂದು ವಿಶೇಷ ಚೇತನ, ಯುವ ಮತ್ತು ಎಥ್ನಿಕ್ ಮತಗಟ್ಟೆಗಳಿವೆ’ ಎಂದು ತಿಳಿಸಿದರು.

ಒಟ್ಟು 1,244 ಮತದಾನ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, 61 ಮಾರ್ಗಗಳಿಗೆ ಅಷ್ಟೇ ಸಂಖ್ಯೆಯ ವಾಹನಗಳನ್ನು ವ್ಯವಸ್ಥೆ ಮಾಡಲಾಗಿದೆ. ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗಿದೆ ಎಂದು ಮಾಹಿತಿ ನೀಡಿದರು.

‘ಮಹಿಳಾ ಮತದಾರರನ್ನು ಸೆಳೆಯಲು ಸಿದ್ಧೇಶ್ವರ ಪಾರ್ಕ್‌ನ ಸೇಂಟ್ ಅಂಟೋನಿ ಪಬ್ಲಿಕ್ ಶಾಲೆ, ವಿವೇಕಾನಂದ ಕಾಲೊನಿಯ ಚಿನ್ಮಯ ವಿದ್ಯಾಲಯ, ಕುಸುಗಲ್ ರಸ್ತೆಯ ಎಸ್‌ಬಿಐ ಆಫೀಸರ್ಸ್ ಅಸೋಸಿಯೇಷನ್‌ ಎಜುಕೇಷನ್ ಸೊಸೈಟಿಯ ಇಂಗ್ಲಿಷ್ ಮಾಧ್ಯಮ ಶಾಲೆ, ಕೇಶ್ವಾಪುರದ ಸಹಸ್ರಾರ್ಜುನ ಕಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆ, ನವ ಆನಂದ ನಗರದ ಸರ್ಕಾರಿ ಮಾದರಿ ಕನ್ನಡ ಪ್ರಾಥಮಿಕ ಶಾಲೆಗಳಲ್ಲಿ ಸಖಿ ಮತಗಟ್ಟೆಗಳನ್ನು ತೆರೆಯಲಾಗಿದೆ. ಸಖಿ ಮತಗಟ್ಟೆಗೆ ಬರುವ ಮಹಿಳಾ ಮತದಾರರಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಲಾಗುವುದು’ ಎಂದರು.

‘ಯುವ ಮತದಾರರನ್ನು ರೋಟರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಯುವ ಮತಗಟ್ಟೆ, ವಿದ್ಯಾನಗರದ ಕಿಮ್ಸ್‌ನಲ್ಲಿ ಥೀಮ್ ಆಧಾರಿತ ಮತಗಟ್ಟೆ, ಉಣಕಲ್‌ನ ಸರ್ಕಾರಿ ಹೆಣ್ಣುಮಕ್ಕಳ ಶಾಲೆಯಲ್ಲಿ ಅಂಗವಿಕಲರಿಗಾಗಿ ಪ್ರತ್ಯೇಕ ಮತಗಟ್ಟೆ ತೆರೆಯಲಾಗಿದೆ’ ಎಂದು ತಿಳಿಸಿದರು.

ಸಿಬ್ಬಂದಿ ಸೋಮವಾರ ರಾತ್ರಿ ಮತಗಟ್ಟೆಗಳಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಅವರಿಗೆ ಊಟ, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಮಾಡಲಾಗಿದೆ. ಬುಧವಾರ ಬೆಳಿಗ್ಗೆ ಅಣಕು ಮತದಾನ ಪ್ರಕ್ರಿಯೆ ನಡೆಸಲಾಗುವುದು, ಅದಕ್ಕೂ ಮುನ್ನ ಸಿಬ್ಬಂದಿಗೆ ಉಪಾಹಾರ ಪೂರೈಸಲಾಗುವುದು ಎಂದು ಹೇಳಿದರು.

ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಸಿಬ್ಬಂದಿಗೆ ಲ್ಯಾಮಿಂಗ್ಟನ್ ಶಾಲೆ ಆವರಣದಲ್ಲಿ ಶಾಮಿಯಾನ ಹಾಕಿ ಊಟ, ಉಪಾಹಾರದ ವ್ಯವಸ್ಥೆ ಮಾಡಲಾಗಿತ್ತು. ಹೆಚ್ಚು ಬಿಸಿಲು, ಸೆಖೆ ಇದ್ದುದರಿಂದ ಶಾಮಿಯಾನದಲ್ಲಿ ಫ್ಯಾನ್ ಅಳವಡಿಸಲಾಗಿತ್ತು.


Spread the love

About Laxminews 24x7

Check Also

ಶೂ ವ್ಯಾಪಾರಿ ನಿವಾಸದಲ್ಲಿ ಬರೋಬ್ಬರಿ 40 ಕೋಟಿ ರೂ. ನಗದು ವಶಕ್ಕೆ IT RAID

Spread the love ಉತ್ತರ ಪ್ರದೇಶದ ಆಗ್ರಾದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿದ ದಾಳಿಯ ಫಲವಾಗಿ 40 ಕೋಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ