ಬೆಳಗಾವಿ : ಸರ್ಕಾರಿ ಸೇವೆ ಮಾಡುತ್ತ ಜನರ ಸಂಕಷ್ಟಕ್ಕೆ ನಿಲ್ಲಬೇಕಾದ ಅಧಿಕಾರಿಗಳೇ ಚುನಾವಣಾ ಪ್ರಚಾರಕ್ಕೆ ತೊಡಗಿದ್ದು ದುರದೃಷ್ಟಕರ ಸಂಗತಿ. ಜಿಲ್ಲೆಯ ಕೆಲ ಅಧಿಕಾರಿಗಳು ಒಂದು ಪಕ್ಷದ ಮುಖಂಡರಂತೆ ವರ್ತನೆ ಮಾಡುತ್ತಿದ್ದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಈ ರೀತಿಯ ಪ್ರಕರಣಗಳು ಸರ್ವೇ ಸಾಮಾನ್ಯ ಆಗಿವೆ. ಈ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾದ ಚುನಾವಣಾ ಆಯೋಗದ ಗಮನಕ್ಕೆ ಅಧಿಕಾರಿಗಳ ಕೆಟ್ಟ ವರ್ತನೆ ಗಮನಕ್ಕೆ ಬರದಿರುವುದು ವಿಪರ್ಯಾಸ.
ಸರ್ಕಾರಿ ಸೇವೆಯಲ್ಲಿರುವ ಅಧಿಕಾರಿಗಳು ಬಹಿರಂಗವಾಗಿ ಒಂದು ಸಮುದಾಯದ ಪರ ನಿಂತು ಕೆಲಸ ಮಾಡುತ್ತಿರುವ ನಡೆಗೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಕೆಲ ಅಧಿಕಾರಿಗಳು ಒಂದು ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕೆ ನಿಂತಿದ್ದು ಎಷ್ಟು ಸರಿ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಮೂಡಿದೆ
Laxmi News 24×7