Breaking News

ಬೆಂಗಳೂರು, ಮಂಡ್ಯದಲ್ಲೂ 25 ಸಾವಿರ ‘ಪೆನ್ ಡ್ರೈವ್’ ಹಂಚಿಕೆ : ಮಾಜಿ ಸಿಎಂ HDK ಗಂಭೀರ ಆರೋಪ

Spread the love

ಬೆಂಗಳೂರು : ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಪೆನ್ ಡ್ರೈವ್ ಪ್ರಕರಣ ಸಂಬಂಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನದಲ್ಲಿ ಮಾತ್ರವಲ್ಲ ಮಂಡ್ಯ ಹಾಗೂ ಬೆಂಗಳೂರು ಗ್ರಾಮಾಂತರದಲ್ಲೂ ಪೆನ್ ಡ್ರೈವ್ ಹಂಚಿಕೆ ಮಾಡಲಾಗಿದೆ.ಏಪ್ರಿಲ್ 27 ರಂದು 25 ಸಾವಿರ ಪೆನ್ ಡ್ರೈವ್ ಹಂಚಿಕೆ ಮಾಡಲಾಗಿದೆ. ಪೆನ್ ಡ್ರೈವ್ ಹಂಚಿಕೆಗೆ ಡಿಸಿ ಹಾಗೂ ಪೊಲಿಸರು ಸಹಕಾರ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

ಪ್ರಕರಣದಿಂದ ನನಗೆ ತುಂಬಾ ನೋವಾಗಿದೆ. ಇದರಲ್ಲಿ ಯಾವುದೇ ರಾಜೀ ಇಲ್ಲ. ೨೫ ಸಾವಿರ ಪೆನ್ ಡ್ರೈವ್ ಹಂಚಿಕೆ ಮಾಡಲಾಗಿದೆ. ಹಾಸನ, ಬೆಂಗಳೂರು, ಗ್ರಾಮಾಂತರ, ಮಂಡ್ಯದಲ್ಲಿ ಹಂಚಿಕೆ ಮಾಡಲಾಗಿದೆ. ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ರೂ ಕಠಿಣ ಕ್ರಮ ಆಗಲಿ ಎಂದರು.


Spread the love

About Laxminews 24x7

Check Also

ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ.

Spread the love ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ. ಮನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ