Breaking News

ಸಾಲಿನಲ್ಲಿ ನಿಂತು ತಮ್ಮ ಹಕ್ಕುನ್ನು ಚಲಾಯಿಸಿದ ಪ್ರಿಯಂಕಾ ಜಾರಕಿಹೊಳಿ

Spread the love

ಚಿಕ್ಕೋಡಿ: ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರು ಸರದಿ ಸಾಲಿನಲ್ಲಿ ನಿಂತು ತಮ್ಮ ಹಕ್ಕುನ್ನು ಚಲಾಯಿಸಿದರು.

ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಹುಕ್ಕೇರಿ ತಾಲೂಕಿನ ಯಮಕನಮರಡಿ ಮತಕ್ಷೇತ್ರದ ಹಳೇ ವಂಟಮೂರಿ ಗ್ರಾಮದ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 95 ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರು ಮತವನ್ನು ಚಲಾಯಿಸಿದರು.

ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಸಚಿವರು, ಜಿಲ್ಲೆಯ ಎಲ್ಲಾ ಶಾಸಕರು, ಮುಖಂಡರು, ಕಾರ್ಯಕರ್ತರು ಸುಡು ಬಿಸಿಲಿನಲ್ಲಿಯೂ ಪ್ರಚಾರ ಮಾಡಿದ್ದಾರೆ.

ಅವರೆಲ್ಲರಿಗೂ ಅನಂತ ಧನ್ಯವಾದಗಳು. ಕಾರ್ಯಕರ್ತರು ಮನೆ ಮನೆಗೆ ತೆರಳಿ ಗ್ಯಾರಂಟಿ ಕಾರ್ಡಗಳನ್ನು ವಿತರಿಸುವ ಮೂಲಕ ನನ್ನ ಪರವಾಗಿ ಮತಯಾಚಿಸಿದ್ದಾರೆ. ಒಂದು ಲಕ್ಷಗಳ ಅಂತರದಿಂದ ಗೆಲುವು ಸಾಧಿಸುತ್ತೇನೆಂಬ ವಿಶ್ವಾಸ ಇದೆ ಎಂದು ತಿಳಿಸಿದರು.


Spread the love

About Laxminews 24x7

Check Also

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Spread the loveನವದೆಹಲಿ: ಪ್ರಸ್ತುತ ಇರುವ 543 ಲೋಕಸಭಾ ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ