Breaking News

ಶೀಘ್ರದಲ್ಲೇ ಮತ್ತೊಂದು ಸಿಡಿ ಫ್ಯಾಕ್ಟರಿ ಓಪನ್ ಆಗಲಿದೆ ಹೊಸ ಬಾಂಬ್ ಸಿಡಿಸಿದ ಯತ್ನಾಳ್

Spread the love

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರ ರಚನೆ ಮಾಡಿರುವ ಎಸ್​​ಐಟಿ ಸಂಪೂರ್ಣವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅಧೀನದಲ್ಲಿದೆ. ಅವರು ಹೇಳಿದಂತೆ ಕೆಲಸ ಮಾಡುತ್ತದೆ. ಹೀಗಾಗಿ ಅದರ ಮೇಲೆ ವಿಶ್ವಾಸ ಇಡಲಾಗದು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ವಿಜಯಪುರ, ಮೇ 7: ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅಶ್ಲೀಲ ವಿಡಿಯೋ ಪ್ರಕರಣದ ಚರ್ಚೆ ದೇಶದಾದ್ಯಂತ ನಡೆಯುತ್ತಿರುವ ಬೆನ್ನಲ್ಲೇ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಶೀಘ್ರದಲ್ಲೇ ಮತ್ತೊಂದು ಸಿಡಿ ಫ್ಯಾಕ್ಟರಿ ಓಪನ್ ಆಗಲಿದೆ ಎಂದು ಅವರು ಹೇಳಿದ್ದಾರೆ. ಇದು ಯಾರಿಗೆ ಸಂಬಂಧಿಸಿದ್ದು, ಯಾರು ಮಾಡುತ್ತಿದ್ದಾರೆ ಇತ್ಯಾದಿ ಯಾವ ವಿವರವನ್ನೂ ಅವರು ಬಹಿರಂಗಪಡಿಸಿಲ್ಲ.

ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನದ ವೇಳೆ ಮತ ಚಲಾಯಿಸಿ ಬಳಿಕ ಮಾತನಾಡಿದ ಅವರು, ಪ್ರಜ್ವಲ್ ಅಶ್ಲೀಲ ವಿಡಿಯೋ ಬಹಿರಂಗವಾಗಿದ್ದರ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್ ಕೈವಾಡವಿದೆ ಎಂದು ಆರೋಪಿಸಿದರು. ಸೋಮವಾರ ವಕೀಲ, ಬಿಜೆಪಿ ನಾಯಕ ದೇವೇರಾಜೇ ಗೌಡರು ಆರೋಪಿಸಿದಂತೆ ಪ್ರಕರಣದಲ್ಲಿ ಡಿಕೆಶಿ ಕೈವಾಡ ಇರುವುದು ಸ್ಪಷ್ಟ ಎಂದು ಹೇಳಿದರು.

ರಾಜ್ಯ ಸರ್ಕಾರ ರಚನೆ ಮಾಡಿರುವ ಎಸ್​​ಐಟಿ ಸಂಪೂರ್ಣವಾಗಿ ಡಿಕೆ ಶಿವಕುಮಾರ್ ವಶದಲ್ಲಿದೆ. ಅವರ ಆಣತಿಯಂತೆ ಕೆಲಸ ಮಾಡುತ್ತದೆ ಎಂದು ಯತ್ನಾಳ್ ದೂರಿದರು.


Spread the love

About Laxminews 24x7

Check Also

ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ

Spread the love ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ ಒಂದು ದಿನ ಪಾರ್ವತಿ ದೇವಿಯು ಕೈಲಾಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ