Home / Uncategorized / ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಅಂತ್ಯ: ಯಾವ್ಯಾವ ಕ್ಷೇತ್ರದಲ್ಲಿಎಷ್ಟು ಮತದಾನ? ಇಲ್ಲಿದೆ ವಿವರ

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಅಂತ್ಯ: ಯಾವ್ಯಾವ ಕ್ಷೇತ್ರದಲ್ಲಿಎಷ್ಟು ಮತದಾನ? ಇಲ್ಲಿದೆ ವಿವರ

Spread the love

ದೇಶವನ್ನೇ ಮುನ್ನಡೆಸೋ ಪ್ರಧಾನಿಯಾದ್ರು ಇಲ್ಲಿ ಸಾಮಾನ್ಯ ವ್ಯಕ್ತಿಯೇ. ವಿಶ್ವದ ಶ್ರೀಮಂತ ವ್ಯಕ್ತಿ ಅನಿಸಿಕೊಂಡರೂ ಅಷ್ಟೇ.. ವೋಟಿಂಗ್ ಬೂತ್​ ಮುಂದೆ ಆತ ಕಾಮನ್ ಮ್ಯಾನ್. ಹೀಗೆ ಸಮಾನತೆ ಸಾರುವ, ನಮ್ಮನ್ನ ಯಾರು ಆಳಬೇಕೆಂದು ನಿರ್ಧರಿಸುವ ಪ್ರಜಾಪ್ರಭುತ್ವದ ಹಬ್ಬವೇ ಮತೋತ್ಸವ.

ಬೆಂಗಳೂರು, : ಕರ್ನಾಟಕದಲ್ಲಿಂದು(Karnataka) (ಮೇ 07) ಲೋಕಸಭೆಗೆ (Loksabha Elections 2024) 2ನೇ ಹಂತದಲ್ಲಿ ಮತದಾನ ನಡೆದಿದ್ದು, ಬಾಕಿ ಉಳಿದಿದ್ದ14 ಕ್ಷೇತ್ರಗಳಿಗೆ ಮತದಾನ ನಡೆದಿದ್ದು, 227 ಅಭ್ಯರ್ಥಿಗಳ ಭವಿಷ್ಯ ಮತಯಂತ್ರಗಳಲ್ಲಿ ಭದ್ರವಾಗಿದೆ. ಇನ್ನು ಮೊದಲನೇ ಹಂತಕ್ಕೆ ಎರಡನೇ ಹಂತದಲ್ಲಿ ಭರ್ಜರಿ ಮತದಾನ ಆಗಿದೆ. ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಶೇಕಡಾ 69.37ರಷ್ಟು ಮತದಾನವಾಗಿದೆ. ಸಿಟಿ ಮಂದಿಗೆ ಹೋಲಿಸಿದ್ರೆ ಹಳ್ಳಿ ಮಂದಿ ಭರ್ಜರಿ ವೋಟಿಂಗ್ ಮಾಡಿದ್ದಾರೆ. ದಕ್ಷಿಣ ಕರ್ನಾಟಕಕ್ಕಿಂತ ಉತ್ತರ ಕರ್ನಾಟಕದ 14 ಕ್ಷೇತ್ರದಲ್ಲಿ ಬಿರುಸಿನ ಮತದಾನವಾಗಿದೆ. ಬಿರು ಬಿಸಿಲನ್ನೂ ಲೆಕ್ಕಿಸದೇ ಮತದಾರರು ಮತಗಟ್ಟೆಗೆ ಆಗಮಿಸಿ ಹಕ್ಕು ಚಲಾಯಿಸಿದ್ದಾರೆ.

ಎಲ್ಲೆಲ್ಲಿ ಎಷ್ಟು ಮತದಾನವಾಗಿದೆ?

ರಾಯಚೂರು 60.72%, ಬೀದರ್ 63.65%, ಕಲಬುರಗಿ 61.73%, ಚಿಕ್ಕೋಡಿ 74.39%, ಕೊಪ್ಪಳ 69.50%, ವಿಜಯಪುರ 64.71%, ಬಾಗಲಕೋಟೆ 70.47%, ಬೆಳಗಾವಿ 70.84%, ಬಳ್ಳಾರಿ 69.74%, ಹಾವೇರಿ 72.59%, ಶಿವಮೊಗ್ಗ 76.05%, ಉತ್ತರ ಕನ್ನಡ 73.52%, ದಾವಣಗೆರೆ 75.48%, ಧಾರವಾಡ ಕ್ಷೇತ್ರದಲ್ಲಿ ಶೇ. 70.54ರಷ್ಟು ಮತದಾನವಾಗಿದೆ.

ಮೊದಲ ಹಂತದ 14 ಕ್ಷೇತ್ರಗಳಲ್ಲಿ ಎಷ್ಟು ಮತದಾನ?

ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆಯಲ್ಲಿ 14 ಕ್ಷೇತ್ರಗಳಲ್ಲಿ ಶೇಕಡಾ 69.56 ರಷ್ಟು ಮತದಾನವಾಗಿತ್ತು. ಮಂಡ್ಯದಲ್ಲಿ (ಶೇ 81.67), ಕೋಲಾರದಲ್ಲಿ (ಶೇ 78.27) ಮತ್ತು ತುಮಕೂರಿನಲ್ಲಿ (ಶೇ 78.05 ರಷ್ಟು) ಅತಿ ಹೆಚ್ಚು ಮತದಾನವಾಗಿತ್ತು. ಬೆಂಗಳೂರು ಸೆಟ್ರಲ್​​​ನಲ್ಲಿ ಶೇ 54.06, ಬೆಂಗಳೂರು ದಕ್ಷಿಣದಲ್ಲಿ ಶೇ 53.17, ಬೆಂಗಳೂರು ಉತ್ತರದಲ್ಲಿ ಶೇ 54.45 ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ ಶೇ 68.30ರಷ್ಟು ಮತದಾನವಾಗಿತ್ತು.

ಒಟ್ಟು 474 ಅಭ್ಯರ್ಥಿಗಳ ಭವಿಷ್ಯ ಎವಿಎಂನಲ್ಲಿ

ಏಪ್ರಿಲ್ 26ರಂದು ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ನಡೆದಿತ್ತು. ಮೊದಲ ಹಂತದಲ್ಲಿ 247 ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದರು. ಇದೀಗ ಎರಡನೇ ಹಂತದಲ್ಲಿ ಒಟ್ಟು 227 ಅಭ್ಯರ್ಥಿಗಳ ಭವಿಷ್ಯ ಮತಯಂತ್ರ ಸೇರಿದೆ. ಇದರೊಂದಿಗೆ ರಾಜ್ಯದ 28 ಕ್ಷೇತ್ರಗಳ ಒಟ್ಟಾರೆ 474 ಅಭ್ಯರ್ಥಿಗಳ ಭವಿಷ್ಯ ಎವಿಎಂನಲ್ಲಿ ಭದ್ರವಾಗಿದ್ದು, ಯಾರು ಗೆಲ್ಲಲಿದ್ದಾರೆ? ಯಾರು ಸೋಲುತ್ತಾರೆ ಎನ್ನುವುದನ್ನು ಜೂನ್ 4 ರವರೆಗೆ ಕಾಯಬೇಕಿದೆ.


Spread the love

About Laxminews 24x7

Check Also

ಬೆಳಗಾವಿ: ಶತಮಾನೋತ್ಸವ ಕಾರ್ಯಕ್ರಮ ಸಂಪನ್ನ

Spread the love ಬೆಳಗಾವಿ: ಇಲ್ಲಿನ ಖಾಸಬಾಗದ ಉಪ್ಪಾರ ಗಲ್ಲಿಯಲ್ಲಿ ನಾಲ್ಕು ದಿನ ವೈಭವದಿಂದ ನಡೆದ ಬನಶಂಕರಿ ದೇವಸ್ಥಾನದ ಶತಮಾನೋತ್ಸವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ