Breaking News

ವೈದ್ಯಕೀಯ ಕಾಲೇಜಿನ ಮಹಿಳಾ ಶೌಚಾಲಯದಲ್ಲಿ ವಿಡಿಯೊ ಚಿತ್ರೀಕರಣ: ಪ್ರಕರಣ ದಾಖಲು

Spread the love

ಮಂಗಳೂರು: ನಗರದ ವೈದ್ಯಕೀಯ ಕಾಲೇಜೊಂದರ ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ವಿಡಿಯೊ ಚಿತ್ರೀಕರಿಸುತ್ತಿದ್ದುದು ಪತ್ತೆಯಾಗಿದೆ. 17 ವರ್ಷದ ಬಾಲಕನೊಬ್ಬ ಈ ಕೃತ್ಯವೆಸಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

‘ಈ ಕೃತ್ಯ ವೆಸಗಿದ್ದಾನೆ ಎನ್ನಲಾದ, ಕಾನೂನು ಸಂಘರ್ಷಕ್ಕೆ ಸಿಲುಕಿದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದು ಆತನನ್ನು ಬಾಲನ್ಯಾಯ ಮಂಡಳಿ ಮುಂದೆ ಹಾಜರುಪಡಿಸಿ ಮುಂದಿನ‌ ಕ್ರಮ ಕೈಗೊಂಡಿದ್ದೇವೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವೈದ್ಯಕೀಯ ಕಾಲೇಜಿನ ಮಹಿಳೆಯರ ಶೌಚಾಲಯದಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಮೊಬೈಲ್ ರಿಂಗಿಣಿಸಿತ್ತು. ಭದ್ರತಾ ಸಿಬ್ಬಂದಿ ಶೌಚಾಲಯವನ್ನು ಪರಿಶಿಲಿಸಿದಾಗ ಮೊಬೈಲ್ ಪತ್ತೆಯಾಗಿತ್ತು. ಮೊಬೈಲನ್ನು ವಶಕ್ಕೆ ಪಡೆದುಕೊಂಡಿದ್ದೇವೆ. ಬಾಲಕ ರೋಗಿಯ ಸೋಗಿನಲ್ಲಿ ವೈದ್ಯಕೀಯ ಕಾಲೇಜಿನ ಒಳಗೆ ಬಂದು ಶೌಚಾಲಯದಲ್ಲಿ ಮೊಬೈಲ್ ಇಟ್ಟಿದ್ದ’ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆಯ ನಗ್ನ ಚಿತ್ರ ಸೆರೆ ಕುರಿತು ನಗರ ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪತ್ತೆಯಾದ ಮೊಬೈಲ್ ಬಳಸಿ ಶೌಚಾಲಯಕ್ಕೆ ಹೋಗಿದ್ದ ಮಹಿಳೆಯರ ವಿಡಿಯೊ ಚಿತ್ರೀಕರಿಸಲಾಗಿತ್ತೇ ಎಂಬ ವಿವರವನ್ನು ಪೊಲೀಸರು ಬಹಿರಂಗಪಡಿಸಿಲ್ಲ.


Spread the love

About Laxminews 24x7

Check Also

ತಂದೆಗೆ ಲಿವರ್ ದಾನ ಮಾಡಿ ಮಹಾದಾನಿ ಆದ ಮಗ

Spread the loveಬೆಳಗಾವಿ: ಲಿವರ್ ಸಂಪೂರ್ಣವಾಗಿ ನಿಷ್ಕ್ರೀಯವಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ರೋಗಿಗೆ ಯಶಸ್ವಿ ಲಿವರ್ ಕಸಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಿ ಜೀವವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ