Home / Uncategorized / ಬಿಜೆಪಿ ನಾಯಕರೇ, ನಮ್ಮ ಕೈಗೆ ಬಡಿಗೆ ಕೊಟ್ಟು ಮತ್ತೆ ಮತ್ತೆ ಯಾಕೆ ಬಡಿಸಿಕೊಳ್ಳುತ್ತೀರಿ? : ಸಿಎಂ ಸಿದ್ದರಾಮಯ್ಯ

ಬಿಜೆಪಿ ನಾಯಕರೇ, ನಮ್ಮ ಕೈಗೆ ಬಡಿಗೆ ಕೊಟ್ಟು ಮತ್ತೆ ಮತ್ತೆ ಯಾಕೆ ಬಡಿಸಿಕೊಳ್ಳುತ್ತೀರಿ? : ಸಿಎಂ ಸಿದ್ದರಾಮಯ್ಯ

Spread the love

ಬೆಂಗಳೂರು : ‌ ಬಿಜೆಪಿ ನಾಯಕರೇ, ನಮ್ಮ ಕೈಗೆ ಬಡಿಗೆ ಕೊಟ್ಟು ಮತ್ತೆ ಮತ್ತೆ ಯಾಕೆ ಬಡಿಸಿಕೊಳ್ಳುತ್ತೀರಿ?. ನಿಮ್ಮ ಸುಳ್ಳುಗಳನ್ನು ಬಯಲು ಮಾಡಲು ಅವಕಾಶ ಕೊಟ್ಟು ಸಮಾಜದ ಎದುರು ಯಾಕೆ ಬೆತ್ತಲಾಗುತ್ತೀರಿ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಈ ಸಂಬಂಧ ಎಕ್ಸ್‌ ನಲ್ಲಿ ಪೋಸ್ಟ್‌ ವೊಂದನ್ನು ಹಂಚಿಕೊಂಡಿರುವ ಅವರು, ಕಾಂಗ್ರೆಸ್ ಸರ್ಕಾರ ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮೋತ್ಸವ ಸಮಿತಿಗೆ ಮುಸ್ಲಿಂ ಸಮುದಾಯದ ನವಾಝ್ ಅವರನ್ನು ಸದಸ್ಯರನ್ನಾಗಿ ಮಾಡಿದೆ ಎಂದು ಎದೆಬಡಿದುಕೊಳ್ಳೀರಲ್ಲಾ?.ನಿಮ್ಮದೇ ಪಕ್ಷದ ಸರ್ಕಾರ 2020 ಮತ್ತು 2022ರ ಸಾಲಿನಲ್ಲಿ ಇದೇ ಬ್ರಹ್ಮೋತ್ಸವ ಸಮಿತಿಗೆ ಮುಸ್ಲಿಂ ಸಮುದಾಯ ವ್ಯಕ್ತಿಗಳನ್ನು ಸದಸ್ಯರನ್ನಾಗಿ ಮಾಡಿದಾಗ ನಿಮ್ಮಲ್ಲಿ ಈಗ ಉಕ್ಕಿ ಹರಿಯುತ್ತಿರುವ ಹಿಂದುತ್ವದ ಅಭಿಮಾನ ಆಗ ಎಲ್ಲಿ ಅಡಗಿ ಕೂತಿತ್ತು?” ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

“ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನ ಸರ್ವಧರ್ಮಗಳನ್ನು ಸಮಭಾವದಿಂದ ಕಾಣುವ ಹಿಂದು ಧರ್ಮದ ಪರಂಪರೆಗೆ ಸಾಕ್ಷಿಯಾಗಿದೆ. ಅಲ್ಲಿನ ಪ್ರತಿಯೊಂದು ಧಾರ್ಮಿಕ ಕಾರ್ಯಕ್ರಮಗಳಲ್ಲಿಯೂ ಎಲ್ಲ ಧರ್ಮಗಳ ಜನತೆ ಭಕ್ತಿ-ಗೌರವದಿಂದ ಭಾಗವಹಿಸುತ್ತಾರೆ. 2020ರಲ್ಲಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಈ ದೇವಸ್ಥಾನದ ಬ್ರಹ್ಮರಥೋತ್ಸವ ಸಮಿತಿಗೆ ಇಮ್ತಿಯಾಜ್ ಪಾಷಾ ಅವರನ್ನು ಸದಸ್ಯರನ್ನಾಗಿ ನೇಮಿಸಿತ್ತು. 2022ರಲ್ಲಿ ಬಿಜೆಪಿ ಸರ್ಕಾರ ಮತ್ತೆ ಈ ಸಮಿತಿಗೆ ಅಪ್ಸರ್ ಅವರನ್ನು ಸದಸ್ಯರನ್ನಾಗಿ ಮಾಡಿತ್ತು” ಎಂದು ತಿಳಿಸಿದ್ದಾರೆ.

“ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಸಂಪತ್ತು ಲೂಟಿ ಮಾಡುವ ದುರುದ್ದೇಶದಿಂದಲೇ ಬಿಜೆಪಿ ಸರ್ಕಾರ ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಮರನ್ನು ಸದಸ್ಯರನ್ನಾಗಿ ಮಾಡಿದೆ ಎಂದು ಆರೋಪಿಸುವಷ್ಟು ಕೀಳು ಮಟ್ಟಕ್ಕೆ ನಾನಿಳಿಯಲಾರೆ. ಎಲ್ಲವನ್ನೂ ಕೇಸರಿ ಕಣ್ಣುಗಳಿಂದ ನೋಡುವ ರೋಗದಿಂದ ಶೀಘ್ರ ಗುಣಮುಖರಾಗಿ ಎಂದು ನಿಮಗೂ ನಿಮ್ಮ ಸರ್ವೋಚ್ಚ ನಾಯಕರಾದ ನರೇಂದ್ರ ಮೋದಿಗೆ ಅವರಿಗೆ ಹಾರೈಸುತ್ತೇನೆ”ಎಂದು ಲೇವಡಿ ಮಾಡಿದ್ದಾರೆ.

ರಾಜ್ಯದ ಬಿಜೆಪಿ ನಾಯಕರೇ, ನಿಮಗೆ ಮಾನ-ಮರ್ಯಾದೆ ಎನ್ನುವುದೇನಾದರೂ ಇದ್ದರೆ ಮೊದಲು ಜನರನ್ನು ತಪ್ಪುದಾರಿಗೆಳೆಯುವ ಈ ಹೇಳಿಕೆಯನ್ನು ವಾಪಸು ಪಡೆದು ರಾಜ್ಯದ ಜಾತ್ಯತೀತ ಕನ್ನಡಿಗರ ಕ್ಷಮೆ ಕೇಳಬೇಕು ಅವರು ಒತ್ತಾಯಿಸಿದರು.

ಮೊಸರಲ್ಲಿ ಕಲ್ಲು ಹುಡುಕುವ ಬುದ್ಧಿ ನಿಲ್ಲಿಸಿ: “ಹೊಸಕೋಟೆಯ ಅವಿಮುಕ್ತೇಶ್ವರಸ್ವಾಮಿ ಬ್ರಹ್ಮರಥೋತ್ಸವ ಸಮಿತಿಯಲ್ಲಿ ಮುಸ್ಲಿಂ ಸದಸ್ಯರೊಬ್ಬರನ್ನು ಸೇರಿಸಿರುವ ವಿಚಾರಕ್ಕೆ ಸಂಬಂಧಿಸಿ ಅಪಪ್ರಚಾರಕ್ಕೆ ಬಿಜೆಪಿ ಇಳಿದಿದೆ. ಆದರೆ, ವಾಸ್ತವದಲ್ಲಿ ಸಮಿತಿಯಲ್ಲಿ ಸರ್ವ


Spread the love

About Laxminews 24x7

Check Also

ಬೆಳಗಾವಿ: ಶತಮಾನೋತ್ಸವ ಕಾರ್ಯಕ್ರಮ ಸಂಪನ್ನ

Spread the love ಬೆಳಗಾವಿ: ಇಲ್ಲಿನ ಖಾಸಬಾಗದ ಉಪ್ಪಾರ ಗಲ್ಲಿಯಲ್ಲಿ ನಾಲ್ಕು ದಿನ ವೈಭವದಿಂದ ನಡೆದ ಬನಶಂಕರಿ ದೇವಸ್ಥಾನದ ಶತಮಾನೋತ್ಸವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ