Breaking News

SIT ಕಿರುಕುಳ ವಿರುದ್ಧ ಕೋರ್ಟ್‌ ನಲ್ಲಿ ಕೇಸು: ಬಿಜೆಪಿ‌ ಮುಖಂಡ ದೇವರಾಜೇಗೌಡ

Spread the love

ಬೆಂಗಳೂರು: ಪ್ರಕರಣದ ವಿಶೇಷ ತನಿಖಾ ತಂಡ ಒಂದು ದಿಕ್ಕಿನಲ್ಲಿ ಮಾತ್ರ ತನಿಖೆ ನಡೆಸುತ್ತಿದೆ. ಹೀಗಾಗಿ ಗುರುವಾರ ಕೋರ್ಟ್‌ ನಲ್ಲಿ ಎಸ್‌ಐಟಿ ವಿರುದ್ಧ ಕ್ರಿಮಿನಲ್‌ ಆರೋಪದಡಿ ಖಾಸಗಿ ಪ್ರಕರಣ ದಾಖಲಿಸುತ್ತೇವೆ ಎಂದು ಹಾಸನ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಹೇಳಿದರು.

SIT ಕಿರುಕುಳ ವಿರುದ್ಧ ಕೋರ್ಟ್‌ ನಲ್ಲಿ ಕೇಸು: ಬಿಜೆಪಿ‌ ಮುಖಂಡ ದೇವರಾಜೇಗೌಡ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಹಿಂದೆಪ್ರಕರಣದಲ್ಲಿ ಕಾರ್ತಿಕ್‌ನ ವಿಚಾರಣೆ ನಡೆಸಲಾಗಿದೆ. ಆದರೆ ಆತನನ್ನು ಬಂಧಿಸಿಲ್ಲ. ಇನ್ನು ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳ್ಳುತ್ತಿದ್ದಂತೆ ರೇವಣ್ಣ ಅವರನ್ನು ಬಂಧಿಸಲಾಗಿದೆ. ಆದರೆ ಕಾರ್ತಿಕ್‌ ಜಾಮೀನು ಅರ್ಜಿ ವಜಾಗೊಂಡರೂ ಏಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿದರು.

ವಿಚಾರಣೆ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧ ನಾನು ಆರೋಪ ಮಾಡಿದಾಗ, ಆ ಹೇಳಿಕೆಯನ್ನು ಅಳಿಸಿ ಹಾಕುವಂತೆ ತನಿಖಾಧಿ ಕಾರಿಗಳು ಒತ್ತಡ ಹಾಕಿದ್ದಾರೆ. ಈ ವಿಷಯವನ್ನೂ ದೂರಿನಲ್ಲಿ ಪ್ರಸ್ತಾವಿಸಲಾಗುತ್ತದೆ ಎಂದರು.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ