Breaking News

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

Spread the love

ಮೈಸೂರು: ಸಂಸದ ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣದಲ್ಲಿ ಅಂತಾರಾಷ್ಟ್ರೀಯ ಜಾಲವೂ ಒಳಗೊಂಡಿದೆ. ಕೂಡಲೇ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಆಗ್ರಹಿಸಿದರು.

ಪೆನ್‌ಡ್ರೈವ್‌ ಹಂಚಿಕೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಕೈವಾಡ ಹಾಗೂ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್‌ನಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, 3 ಕೋಟಿ ರೂ.

ನೀಡಿ ಚೆನ್ನೈ ಕಂಪೆನಿಯೊಂದರಿಂದ ಪೆನ್‌ಡ್ರೈವ್‌ ಖರೀದಿಸಿದ್ದಾರೆ. ಬಳಿಕ ಮಲೇ ಷಿ ಯಾಕ್ಕೆ ಹೋಗಿ ಅಲ್ಲಿನ ಲ್ಯಾಬ್‌ ನಲ್ಲಿ ವೀಡಿಯೋ ಅಪ್‌ಲೋಡ್‌ ಮಾಡಲಾಗಿದೆ ಎಂದು ಆರೋಪಿಸಿದರು.

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

ಮಾಜಿ ಸಚಿವ ಸಾ.ರಾ.ಮಹೇಶ್‌ ಮಾತ ನಾಡಿ, ಎಸ್‌ಐಟಿಯವರು ಸಂತ್ರಸ್ತೆಯನ್ನು ಪತ್ತೆ ಮಾಡಿ ದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಈವರೆಗೆ ಮ್ಯಾಜಿ ಸ್ಟ್ರೇಟ್‌ ಮುಂದೆ ಯಾಕೆ ಹಾಜರುಪಡಿ ಸಿಲ್ಲ ಎಂದು ಪ್ರಶ್ನಿಸಿದರು. ಪ್ರತಿಭಟನೆಯಲ್ಲಿ ಮಾಜಿ ಶಾಸಕರಾದ ಕೆ.ಮಹದೇವ್‌, ಅಶ್ವಿ‌ನ್‌ ಕುಮಾರ್‌, ಎಂಎಲ್‌ಸಿ ಸಿ.ಎನ್‌.ಮಂಜೇಗೌಡ ಮುಂತಾದವರಿದ್ದರು.

ಪ್ರಜ್ವಲ್‌ಗೆ ಮತ್ತಷ್ಟು ಸಂಕಷ್ಟ
ಪ್ರಜ್ವಲ್‌ ವಿರುದ್ಧ ಕೇಳಿ ಬಂದಿರುವ ಅಶ್ಲೀಲ ವೀಡಿಯೋ ಪೆನ್‌ಡ್ರೈವ್‌ ಪ್ರಕರಣದಲ್ಲಿ ಇನ್ನೂ 6 ಮಂದಿ ಸಂತ್ರಸ್ತೆಯರನ್ನು ಎಸ್‌ಐಟಿ ಅಧಿಕಾರಿಗಳು ಸಂಪರ್ಕಿಸಿದ್ದಾರೆ ಎನ್ನಲಾಗಿದೆ. ಈಗಾಗಲೇ ದೂರು ನೀಡಿರುವ ಸಂತ್ರಸ್ತೆಯರ ಹೇಳಿಕೆಯನ್ನು ದಾಖಲಿಸುವ ಕಾರ್ಯ ನಡೆಯುತ್ತಿದೆ. ಈಗ ಇನ್ನೂ ಹಲವು ಮಂದಿ ಪ್ರಜ್ವಲ್‌ ವಿರುದ್ಧ ದೂರು ನೀಡಿದರೆ ಸಂಕಷ್ಟ ಎದುರಾಗಲಿದೆ ಎಂದು ತಿಳಿದು ಬಂದಿದೆ


Spread the love

About Laxminews 24x7

Check Also

ಟೀ ಕಪ್ ಹಿಡಿದುಕೊಂಡು ನಗುವ ಈ ವೈರಲ್ ಹುಡುಗ ಯಾರು?: ಆತ ಏನು ಕೆಲಸ ಮಾಡುತ್ತಿದ್ದಾನೆ?

Spread the loveಇತ್ತೀಚಿನ ದಿನಗಳಲ್ಲಿ ನೀವು ಇನ್ಸ್ಟಾಗ್ರಾಮ್ ಅಥವಾ ಯೂಟ್ಯೂಬ್ ರೀಲ್ಸ್ ನೋಡುವಾಗ ಕೈಯಲ್ಲಿ ಟೀ ಕಪ್ ಹಿಡಿದು ನಗುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ