Breaking News

ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ಗೋಡೆ ಕುಸಿದು 7 ಮಂದಿ ಸಾವು

Spread the love

ಹೈದರಾಬಾದ್: ಭಾರೀ ಮಳೆಯಿಂದಾಗಿ ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ತಡೆಗೋಡೆ ಕುಸಿದು ನಾಲ್ಕು ವರ್ಷದ ಮಗು ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ಬಾಚುಪಲ್ಲಿ ಪ್ರದೇಶದಲ್ಲಿ ನಡೆದಿದೆ.

ಮೃತರು ಒಡಿಶಾ ಮತ್ತು ಛತ್ತೀಸ್‌ಗಢಕ್ಕೆ ಸೇರಿದ ವಲಸೆ ಕಾರ್ಮಿಕರಾಗಿದ್ದು, ಮಂಗಳವಾರ(ಮೇ.7 ರಂದು) ಸಂಜೆ ಈ ಘಟನೆ ನಡೆದಿದೆ ಎಂದು ಬಾಚುಪಲ್ಲಿ ಪೊಲೀಸರು ತಿಳಿಸಿದ್ದಾರೆ.

Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ಗೋಡೆ ಕುಸಿದು 7 ಮಂದಿ ಸಾವು

ಮೃತ ದೇಹಗಳನ್ನು ಅವಶೇಷಗಳಡಿಯಿಂದ ಬುಧವಾರ ಮುಂಜಾನೆ ಹೊರತೆಗೆಯಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳವಾರ ತೆಲಂಗಾಣದ ಹಲವೆಡೆ ಭಾರೀ ಮಳೆ ಸುರಿದಿದ್ದು, ಕೆಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದ ಹಲವು ಪ್ರದೇಶ ಜಲಾವೃತಗೊಂಡು ಟ್ರಾಫಿಕ್ ಬ್ಲಾಕ್ ಆಗಿದೆ. ವಿವಿಧೆಡೆ ಡಿಆರ್‌ಎಫ್ (ವಿಪತ್ತು ಪರಿಹಾರ ಪಡೆ) ತಂಡಗಳನ್ನು ನಿಯೋಜಿಸಲಾಗಿದೆ ಮತ್ತು ನಗರದ ವಿವಿಧ ಸ್ಥಳಗಳಲ್ಲಿ ನೀರು ನಿಂತಿರುವುದು ಮತ್ತು ಬಿದ್ದ ಮರಗಳನ್ನು ತೆರವುಗೊಳಿಸಲಾಗುತ್ತಿದೆ ಎಂದು ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಪಟ್ಟ ಅಧಿಕಾರಿಗಳು ವಿವಿಧ ಜಲಾವೃತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.


Spread the love

About Laxminews 24x7

Check Also

ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ

Spread the love ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ ಒಂದು ದಿನ ಪಾರ್ವತಿ ದೇವಿಯು ಕೈಲಾಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ