Home / Uncategorized / SSLC ಪರೀಕ್ಷೆ’ಯಲ್ಲಿ 625ಕ್ಕೆ 624 ಅಂಕ: ಕಾಗವಾಡ ತಾಲೂಕಿನ ‘ರೈತನ ಮಗ’ ರಾಜ್ಯಕ್ಕೆ ‘ದ್ವಿತೀಯ’

SSLC ಪರೀಕ್ಷೆ’ಯಲ್ಲಿ 625ಕ್ಕೆ 624 ಅಂಕ: ಕಾಗವಾಡ ತಾಲೂಕಿನ ‘ರೈತನ ಮಗ’ ರಾಜ್ಯಕ್ಕೆ ‘ದ್ವಿತೀಯ’

Spread the love

ಬೆಳಗಾವಿ: ಇಂದು ಶಾಲಾ ಶಿಕ್ಷಣ ಇಲಾಖೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಈ ಪರೀಕ್ಷೆಯಲ್ಲಿ 625ಕ್ಕೆ 624 ಅಂಕ ಗಳಿಸುವ ಮೂಲಕ ರೈತನ ಮಗನೊಬ್ಬ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾನೆ.

ಹೌದು. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದ ಸಿದ್ದಾಂತ ನಾಯಿಕಬಾ ಗಡಗೆ ಅವರು 625 ಅಂಕಗಳಿಗೆ 624 ಅಂಕವನ್ನು ಗಳಿಸುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾನೆ.

ಅಂದಹಾಗೇ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿದೆ. ಇಲ್ಲಿನ ಸುಬಲಸಾಗರ ಪ್ರೌಢ ವಿದ್ಯಾಮಂದಿರದ ಶಾಲೆಯಲ್ಲಿ ಸಿದ್ದಾಂತ ನಾಯಿಕಬಾ ಗಡಗೆ ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದರು. ಈತ ರೈತನ ಮಗ ಎಂಬುದಾಗಿ ತಿಳಿದು ಬಂದಿದೆ. ಹೀಗಿದ್ದೂ ಇಂಗ್ಲೀಷಿನಲ್ಲಿ 99 ಪಡೆದಿದ್ದು, ಉಳಿದ ವಿಷಯಗಳಲ್ಲಿ ಔಟ್ ಆಫ್ ಔಟ್ ಅಂಕ ಪಡೆದಿದ್ದಾನೆ.


Spread the love

About Laxminews 24x7

Check Also

ಬೆಳಗಾವಿ: ಶತಮಾನೋತ್ಸವ ಕಾರ್ಯಕ್ರಮ ಸಂಪನ್ನ

Spread the love ಬೆಳಗಾವಿ: ಇಲ್ಲಿನ ಖಾಸಬಾಗದ ಉಪ್ಪಾರ ಗಲ್ಲಿಯಲ್ಲಿ ನಾಲ್ಕು ದಿನ ವೈಭವದಿಂದ ನಡೆದ ಬನಶಂಕರಿ ದೇವಸ್ಥಾನದ ಶತಮಾನೋತ್ಸವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ