Breaking News
Home / ಜಿಲ್ಲೆ / ಬೆಂಗಳೂರು / ಸೋಮವಾರದ ಜಿಲ್ಲಾಧಿಕಾರಿಗಳ ಸಭೆಯ ನಂತರ ಮತ್ತೆ ಸಂಪೂರ್ಣ ಕರ್ನಾಟಕ ಲಾಕ್ ಡೌನ್ ಆಗತ್ತಾ..?

ಸೋಮವಾರದ ಜಿಲ್ಲಾಧಿಕಾರಿಗಳ ಸಭೆಯ ನಂತರ ಮತ್ತೆ ಸಂಪೂರ್ಣ ಕರ್ನಾಟಕ ಲಾಕ್ ಡೌನ್ ಆಗತ್ತಾ..?

Spread the love

ಬೆಂಗಳೂರು: ಇಂದು ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳು ಮಂಗಳವಾರದಿಂದ ಒಂದು ಲಾಕ್‍ಡೌನ್ ಆಗಲಿವೆ. ಇದೇ ರೀತಿ ಸೋಮವಾರ ಉಳಿದ ಜಿಲ್ಲೆಗಳಲ್ಲಿ ಲಾಕ್‍ಡೌನ್ ಘೋಷಿಸುವ ಸಾಧ್ಯತೆಗಳಿವೆ.

ಸೋಮವಾರ ಜಿಲ್ಲಾಧಿಕಾರಿಗಳ ಸಿಎಂ ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ಸಭೆಯಲ್ಲಿ ಜಿಲ್ಲೆಯ ಸ್ಥಿತಿ ಗತಿಗಳ ಬಗ್ಗೆ ಮಾಹಿತಿಯನ್ನು ಮುಖ್ಯಮಂತ್ರಿಗಳು ಪಡೆಯಲಿದ್ದಾರೆ. ಜಿಲ್ಲಾಧಿಕಾರಿಗಳು ನೀಡುವ ವರದಿ ಆಧರಿಸಿ ಸೋಮವಾರ ಸಂಜೆ ಲಾಕ್‍ಡೌನ್ ಘೋಷಣೆ ಮಾಡುವ ಸಾಧ್ಯತೆಗಳು ದಟ್ಟವಾಗಿವೆ.

ಹೆಚ್ಚು ಕೊರೊನಾ ಪ್ರಕರಣಗಳಿರುವ ಜಿಲ್ಲೆಗಳನ್ನು ಲಾಕ್‍ಡೌನ್ ಮಾಡಬಹುದು. ಹಾಗೆ ಅಂತರ್ ಜಿಲ್ಲಾ ಪ್ರವೇಶಕ್ಕೂ ನಿರ್ಬಂಧ ಹೇರಬಹುದು. ಹಾಗೆ ಸೋಂಕು ಕಡಿಮೆ ಇರೋ ಜಿಲ್ಲೆಗಳಲ್ಲಿ ಹಾಫ್ ಲಾಕ್‍ಡೌನ್ ಅಥವಾ ಸೀಲ್‍ಡೌನ್ ತಂತ್ರಗಳನ್ನು ಬಳಸಬಹುದು. ಸದ್ಯಕ್ಕೆ ಎರಡು ಜಿಲ್ಲೆಗಳಿಗೆ ಬೀಗ ಹಾಕಲಾಗಿದ್ದು, ಸೋಮವಾರ ರಾಜ್ಯ ಸರ್ಕಾರ ಪ್ರಕಟಿಸುವ ನಿರ್ಧಾರದತ್ತ ಎಲ್ಲರ ಚಿತ್ತವಿದೆ.

 


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ