ಹಾಸನ: ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಈ ದೇಶದಿಂದಲೇ ಗಡಿಪಾರು ಮಾಡುವಂತೆ ಶಾಸಕಿ ನಯನಾ ಮೋಟಮ್ಮ ಆಗ್ರಹಿಸಿದ್ದಾರೆ.
ಇಂದು ಹಾಸನ ಜಿಲ್ಲೆಯ ಬೇಲೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ದೇಶವೇ ತಲೆತಗ್ಗಿಸುವಂತ ಕೇಸ್ ಆಗಿದೆ.ಈ ಪ್ರಕರಣದಲ್ಲಿ ಸಂತ್ರಸ್ತೆಯರಾದಂತ ಮಹಿಳೆಯರಿಗೆ ಸಾಂತ್ವಾನ, ಆತ್ಮಸ್ಥೈರ್ಯ ತುಂಬುವಂತ ಕೆಲಸ ಮಾಡಬೇಕಿದೆ ಎಂದರು.
ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಯಾರೇ ಬಲಾಢ್ಯರಾದರೂ ಸಹ ಅವರಿಗೆ ತಕ್ಕ ಶಾಸ್ತಿಯಾಗಲೇ ಬೇಕು. ಸುಸಂಸ್ಕೃತ ರಾಜಕಾರಣಿಯವರ ಕುಟುಂಬದಿಂದ ಬಂದಿರುವಂತ ಇಂತಹ ಪ್ರಜ್ವಲ್ ರೇವಣ್ಣ ಸಂಸದರಾಗಿರೋದಕ್ಕೆ ಯೋಗ್ಯತೆನೇ ಇಲ್ಲ ಎಂಬುದಾಗಿ ವಾಗ್ಧಾಳಿ ನಡೆಸಿದರು.
ಸಂಸದ ಪ್ರಜ್ವಲ್ ರೇವಣ್ಣ ಮಾಡಿರೋದು ಇಡೀ ಸಮಾಜವೇ ತಲೆ ತಗ್ಗಿಸುವಂತ ಕೆಲಸವಾಗಿದೆ. ಇಂತಹವರಿಗೆ ಕಠಿಣ ಶಿಕ್ಷೆಯಾಗಬೇಕು. ಅಲ್ಲದೇ ಈ ದೇಶದಿಂದಲೇ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಗಡಿಪಾರು ಮಾಡಬೇಕು ಎಂಬುದಾಗಿ ಆಗ್ರಹಿಸಿದರು.
Laxmi News 24×7