Breaking News

ಬೆಳಗಾವಿಯಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

Spread the love

ಬೆಳಗಾವಿ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಹಿಂದೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕೈವಾಡವಿದೆ ಎಂದು ಆರೋಪಿಸಿ ಗುರುವಾರ ನಗರದ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಈ ಪ್ರಕರಣದಲ್ಲಿ ಡಿ ಕೆ ಶಿವಕುಮಾರ್ ಅವರು ಖಳನಾಯಕರಾಗಿದ್ದಾರೆ ಎಂದು ಅರೋಪಿಸಿದ ಕಾರ್ಯಕರ್ತರು, ಕೂಡಲೇ ಶಿವಕುಮಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು.

ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.

Prajwal Case; ಬೆಳಗಾವಿಯಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ ಹಾಗೂ ರಣದೀಪಸಿಂಗ್ ಸುರ್ಜೇವಾಲಾ ಅವರು ಸಿಡಿ ಕಾರ್ಖಾನೆ ಹೊಂದಿದ್ದಾರೆ. ಪ್ರಕರಣದ ಹಿಂದೆ ರಾಜ್ಯ ಸರಕಾರದ ಕೈವಾಡವಿದ್ದು ಇದರ ಬಗ್ಗೆ ಸಮಗ್ರ ತನಿಖೆ ನಡೆಸಿ ಸರಕಾರವನ್ನು ವಜಾಗೊಳಿಸಬೇಕು ಎಂದು ಪ್ರತಿಭಟನಾಕಾರರ ಒತ್ತಾಯಿಸಿದರು.

ಪ್ರಜ್ವಲ್ ರೇವಣ್ಣರ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ ಐಟಿ ರಾಜ್ಯ ಸರಕಾರದ ಕೈಗೊಂಬೆಯಾಗಿದೆ. ಈ ಪ್ರಕರಣದಲ್ಲಿ ಶಾಸಕ ಎಚ್ ಡಿ ರೇವಣ್ಣ ಅವರನ್ನು ಉದ್ದೇಶಪೂರ್ವಕವಾಗಿ ಜೈಲಿಗೆ ಕಳಿಸಲಾಗಿದೆ ಎಂದು ಆರೋಪಿಸಿದ್ದಾರೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ