ಬೆಂಗಳೂರು : ಇಂದು ಸಂಜೆ ಬಳಿಕ ದಿಢೀರನೆ ಸಿಲಿಕಾನ್ ಸಿಟಿಯಲ್ಲಿ ವರುಣನ ಆರ್ಭಟ ಶುರುವಾಯಿತು. ಅರ್ಧ ಗಂಟೆಗೂ ಹೆಚ್ಚು ಕಾಲ ಜೋರು ಮಳೆ ಸುರಿಯಿತು.
ಬಿಸಿಲಿನಿಂದ ಕಂಗೆಟ್ಟಿದ್ದ ಬೆಂಗಳೂರಿನ ಜನತೆ ಎರಡು ದಿನಗಳಿಂದ ಸುರಿಯುತ್ತಿರು ಮಳೆಯಿಂದಾಗಿ ನಿಟ್ಟುಸಿರು ಬಿಟ್ಟಿದ್ದಾರೆ.ಆದರೆ, ದಿಢೀರ್ ಮಳೆಯಿಂದ ಕೆಲವೆಡೆ ಜನಜೀವನ ಅಸ್ತವ್ಯಸ್ಥಗೊಂಡಿದೆ.
ಯಶವಂತಪುರ, ಮೆಜೆಸ್ಟಿಕ್, ರಾಜಾಜಿನಗರ, ಮಲ್ಲೇಶ್ವರಂ, ವಿಜಯನಗರ, ಬಸವನಗುಡಿ, ಚಾಮರಾಜಪೇಟೆ, ಕಾರ್ಪೊರೇಷನ್, ಟೌನ್ ಹಾಲ್, ಮೈಸೂರು ಬ್ಯಾಂಕ್ ಸರ್ಕಲ್ ಸೇರಿದಂತೆ ಹಲವೆಡೆ ಮಳೆಯಾಗಿದೆ.
ಕಳೆದ ನಾಲ್ಕೈದು ದಿನಗಳಿಂದ ನಗರದಲ್ಲಿ ಮಳೆಯಾಗುತ್ತಿದೆ. ಇಂದು ಸಹ ದಿಢೀರ್ ಮಳೆ ಹಿನ್ನೆಲೆ ವಾಹನ ಸವಾರರು ಪರದಾಡುವಂತಾಗಿದೆ. ಇನ್ನು ಮಳೆಯಿಂದ ಬಿಸಿಲಿನಿಂದ ಕಂಗೆಟ್ಟಿದ್ದ ಸಿಲಿಕಾನ್ ಸಿಟಿ ಜನ ನಿಟ್ಟುಸಿರು ಬಿಡುವಂತಾಗಿದೆ. ರಾಜ್ಯ ರಾಜಧಾನಿ ಕೂಲ್ ಆಗಿದೆ.
Laxmi News 24×7