Breaking News

ಮತ್ತೆ ಬೆಂಗಳೂರಿನಲ್ಲಿ ಮಳೆ ಶುರು : ರಾಜ್ಯ ರಾಜಧಾನಿ ಕೂಲ್ ಕೂಲ್

Spread the love

ಬೆಂಗಳೂರು : ಇಂದು ಸಂಜೆ ಬಳಿಕ ದಿಢೀರನೆ ಸಿಲಿಕಾನ್ ಸಿಟಿಯಲ್ಲಿ ವರುಣನ ಆರ್ಭಟ ಶುರುವಾಯಿತು. ಅರ್ಧ ಗಂಟೆಗೂ ಹೆಚ್ಚು ಕಾಲ ಜೋರು ಮಳೆ ಸುರಿಯಿತು.

ಬಿಸಿಲಿನಿಂದ ಕಂಗೆಟ್ಟಿದ್ದ ಬೆಂಗಳೂರಿನ ಜನತೆ ಎರಡು ದಿನಗಳಿಂದ ಸುರಿಯುತ್ತಿರು ಮಳೆಯಿಂದಾಗಿ ನಿಟ್ಟುಸಿರು ಬಿಟ್ಟಿದ್ದಾರೆ.ಆದರೆ, ದಿಢೀರ್​ ಮಳೆಯಿಂದ ಕೆಲವೆಡೆ ಜನಜೀವನ ಅಸ್ತವ್ಯಸ್ಥಗೊಂಡಿದೆ.

 

ಯಶವಂತಪುರ, ಮೆಜೆಸ್ಟಿಕ್, ರಾಜಾಜಿನಗರ, ಮಲ್ಲೇಶ್ವರಂ, ವಿಜಯನಗರ, ಬಸವನಗುಡಿ, ಚಾಮರಾಜಪೇಟೆ, ಕಾರ್ಪೊರೇಷನ್, ಟೌನ್ ಹಾಲ್, ಮೈಸೂರು ಬ್ಯಾಂಕ್ ಸರ್ಕಲ್ ಸೇರಿದಂತೆ ಹಲವೆಡೆ ಮಳೆಯಾಗಿದೆ.

ಕಳೆದ ನಾಲ್ಕೈದು ದಿನಗಳಿಂದ ನಗರದಲ್ಲಿ ಮಳೆಯಾಗುತ್ತಿದೆ. ಇಂದು ಸಹ ದಿಢೀರ್ ಮಳೆ ಹಿನ್ನೆಲೆ ವಾಹನ​ ಸವಾರರು ಪರದಾಡುವಂತಾಗಿದೆ. ಇನ್ನು ಮಳೆಯಿಂದ ಬಿಸಿಲಿನಿಂದ ಕಂಗೆಟ್ಟಿದ್ದ ಸಿಲಿಕಾನ್‌ ಸಿಟಿ ಜನ ನಿಟ್ಟುಸಿರು ಬಿಡುವಂತಾಗಿದೆ. ರಾಜ್ಯ ರಾಜಧಾನಿ ಕೂಲ್​ ಆಗಿದೆ.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ