Breaking News

ಶ್ರೀ ಕೃಷ್ಣ ಮಠದಲ್ಲಿ ಸ್ವರ್ಣಾಲಯದ ಶುಭಾರಂಭ

Spread the love

ಡುಪಿ: ಶ್ರೀ ಕೃಷ್ಣನ ಸ್ವರ್ಣ ರಥಕ್ಕೆ ಬೇಕಾದ ಚಿನ್ನವನ್ನು ತಮ್ಮ ತಮ್ಮ ಶಕ್ತ್ಯನುಸಾರ ನೀಡಲು ಉತ್ಸುಕರಾದ ಭಕ್ತರಿಗಾಗಿ ಖರೀದಿಸಲು ಬೇಕಾದ ಚಿನ್ನದ ನಾಣ್ಯ ಸಂಗ್ರಹದ ಸ್ವರ್ಣಾಲಯವನ್ನು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಗೌರವ ಉಪಸ್ಥಿತಿಯಲ್ಲಿ ಭಂಡಾರಿಕೇರಿ ಮಠಾಧೀಶರಾದ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು ಗುರುವಾರ ದೀಪ ಬೆಳಗಿಸಿ ಲೋಕಾರ್ಪಣೆ ಗೊಳಿಸಿದರು .

Udupi; ಶ್ರೀ ಕೃಷ್ಣ ಮಠದಲ್ಲಿ ಸ್ವರ್ಣಾಲಯದ ಶುಭಾರಂಭ

ಮೇ 10 ರಂದು(ಶುಕ್ರವಾರ) ಅಕ್ಷಯ ತೃತೀಯದ ಪರ್ವ ದಿನವಾದ ಪ್ರಯುಕ್ತ ಪೂಜ್ಯ ಪರ್ಯಾಯ ಶ್ರೀಪಾದರ ಅಪೇಕ್ಷೆಯಂತೆ, ಭಕ್ತರ ಕೋರಿಕೆಯಂತೆ ಅತಿ ಶೀಘ್ರದಲ್ಲಿ ಈ ಕೌಂಟರ್ ತೆರೆಯಲಾಯಿತು.

ಪರ್ಯಾಯ ಶ್ರೀಪಾದರು ಸಂಕಲ್ಪಿಸಿರುವ ಶ್ರೀ ಕೃಷ್ಣನಿಗೊಂದು ಸ್ವರ್ಣ ಪಾರ್ಥಸಾರಥಿ ರಥಕ್ಕೆ ದೇಣಿಗೆ ನೀಡ ಬಯಸುವ ಭಕ್ತರು ಈ ಅಕ್ಷಯ ತೃತೀಯದ ಪರ್ವ ಕಾಲವನ್ನು ಸ್ವರ್ಣ ದಾನ ಮಾಡುವ ಮೂಲಕ ಸದುಪಯೋಗ ಪಡೆದು ಕೊಂಡು ಶ್ರೀಕೃಷ್ಣನ ಪರಮಾನುಗ್ರಹಕ್ಕೆ ಪಾತ್ರರಾಗಬೇಕಾಗಿ ಪೂಜ್ಯ ಪರ್ಯಾಯ ಶ್ರೀಪಾದರು ಕರೆ ನೀಡಿದ್ದಾರೆ 


Spread the love

About Laxminews 24x7

Check Also

ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ

Spread the love ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ ಒಂದು ದಿನ ಪಾರ್ವತಿ ದೇವಿಯು ಕೈಲಾಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ