Breaking News

ಪೆನ್‌ಡ್ರೈವ್‌ ಪ್ರಕರಣ: ಕಲಾಪ ತಾತ್ಕಾಲಿಕ ಸ್ಥಳಾಂತರಕ್ಕೆ ರಿಜಿಸ್ಟ್ರಾರ್‌ಗೆ ಪತ್ರ

Spread the love

ದಗ: ಪೆನ್‌ಡ್ರೈವ್‌ ಪ್ರಕರಣಗಳ ವಿಚಾರಣೆ ನಡೆಸುವ ನ್ಯಾಯಾಲಯಗಳನ್ನು ವಿಚಾರಣೆ ದಿನಗಳಂದು ಯುವಜನ ಮತ್ತು ಕ್ರೀಡಾ ಇಲಾಖೆಯ ಗುರುನಾನಕ ಭವನಕ್ಕೆ ಸ್ಥಳಾಂತರಿಸಲು ಹೈಕೋರ್ಟ್‌ ರಿಜಿಸ್ಟ್ರಾರ್‌ಗೆ ಪತ್ರ ಬರೆಯಲಾಗಿದೆ ಎಂದು ಸಚಿವ ಎಚ್‌.ಕೆ.ಪಾಟೀಲ ಹೇಳಿದರು.

ಪೆನ್‌ಡ್ರೈವ್‌ ಪ್ರಕರಣ: ಕಲಾಪ ತಾತ್ಕಾಲಿಕ ಸ್ಥಳಾಂತರಕ್ಕೆ ರಿಜಿಸ್ಟ್ರಾರ್‌ಗೆ ಪತ್ರ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದ ದೌರ್ಜನ್ಯ ಪ್ರಕರಣಕ್ಕೆ ಸಂಬಂ ಧಿಸಿದಂತೆ ಈಗಾಗಲೇ ಎಸ್‌ಐಟಿ ಸೂಕ್ಷ್ಮವಾಗಿ ತನಿಖೆ ಮಾಡುತ್ತಿದೆ.

ಕೋವಿಡ್‌ ಕಾಲದಲ್ಲಿ ಕ್ರಿಮಿನಲ್‌ ಪ್ರಕರಣ ಸೇರಿ ವಿವಿಧ ಪ್ರಕರಣಗಳ ಪ್ರತ್ಯೇಕ ವಿಚಾರಣೆ ನಡೆಸಿದ ಮಾದರಿಯಲ್ಲೇ ಪೆನ್‌ಡ್ರೈವ್‌ ಪ್ರಕರಣಗಳ ವಿಚಾರಣೆಯನ್ನು ಅದೇ ಗುರುನಾನಕ್‌ ಭವನದಲ್ಲಿ ನಡೆಸುವ ಸಲುವಾಗಿ ಪ್ರಕರಣಗಳ ವಿಚಾರಣೆ ದಿನಗಳಂದು ಮಾತ್ರ ಸೀಮಿತವಾಗಿ 42ನೇ ಎಸಿಎಂಎಂ ನ್ಯಾಯಾಲಯ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಸಿವಿಲ್‌ ಕೋರ್ಟ್‌ ಆಯಂಡ್‌ ಸೆಷನ್‌ ಜಡ್ಜ್ ನ್ಯಾಯಾಲಯಗಳನ್ನು ತಾತ್ಕಾಲಿಕವಾಗಿ ಸ್ಥಳಾಂತರಿಸುವಂತೆ ಪತ್ರ ಬರೆಯಲಾಗಿದೆ ಎಂದರು


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ