Breaking News

SSLC ವಿದ್ಯಾರ್ಥಿನಿ ಮೀನಾ ರುಂಡ-ಮುಂಡ ಬೇರ್ಪಡಿಸಿದ ಆರೋಪಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

Spread the love

ಕೊಡಗು: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್​ಎಸ್​ಎಲ್​ಸಿ ಬಾಲಕಿಯನ್ನು ಕೊಂದು ಆಕೆಯ ರುಂಡವನ್ನು ಕೊಂಡೊಯ್ದಿದ್ದ ಆರೋಪಿ ಮೊನ್ನಂಡ ಪ್ರಕಾಶ್​ (33) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದರೆ ಬಾಲಕಿಯ ತಲೆ ಪತ್ತೆಯಾಗಿಲ್ಲ.

SSLC ವಿದ್ಯಾರ್ಥಿನಿ ಮೀನಾ ರುಂಡ-ಮುಂಡ ಬೇರ್ಪಡಿಸಿದ ಆರೋಪಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಪೊಲೀಸರು ಶೋಧಕಾರ್ಯ ಮಾಡುವ ಸಮಯದಲ್ಲಿ ಸೂರ್ಲಬ್ಬಿ ಗ್ರಾಮದಿಂದ 3 ಕಿ.ಮೀ. ದೂರದ ಹಮ್ನಿಯಾಲದಲ್ಲಿ ಪ್ರಕಾಶ್ ಅಲಿಯಾಸ್ ಓಂಕಾರಪ್ಪ ಮೃತದೇಹ ಪತ್ತೆಯಾಗಿದೆ. ಇನ್ನು ಬಾಲಕಿಯ ರುಂಡಕ್ಕಾಗಿ ಶೋಧಕಾರ್ಯ ಮುಂದುವರೆದಿದೆ.

16 ವರ್ಷದ ಬಾಲಕಿಗೂ 35 ವರ್ಷದ ಆರೋಪಿಗೂ ಮದುವೆ ಮಾಡಿಸಲು ಪೋಷಕರು ನಿರ್ಧರಿಸಿದ್ದರು. ಗುರುವಾರವಷ್ಟೇ ಇಬ್ಬರ ಮದುವೆ ನಿಶ್ಚಿತಾರ್ಥ ಕೂಡ ನಡೆದಿತ್ತು. ಈ ಬಗ್ಗೆ ಮಾಹಿತಿ ಪಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಅವರನ್ನು ತಡೆದಿದ್ದರು. ಬಾಲ್ಯ ವಿವಾಹ ಮಾಡದಂತೆ ಪೋಷಕರ ಮನವೊಲಿಸಿದ್ದರು.

18 ವರ್ಷ ತುಂಬಿದ ಬಳಿಕ ನಂತರವೇ ಮದುವೆ ಮಾದುವುದಾಗಿ ಮುಚ್ಚಳಿಕೆಯನ್ನು ಬರೆಸಿಕೊಂಡು ಅಧಿಕಾರಿಗಳು ವಾಪಸದಸಾದರು. ನಂತರ ಮನೆಗೆ ಬಂದ ಆರೋಪಿಯು ಬಾಲಕಿಯ ಕಾಡಿಗೆ ಕರೆದುಕೊಂಡು ಹೋಗಿ ತಲೆ ಕತ್ತರಿಸಿ ಪಾರಾರಿಯಾಗಿದ್ದ. ಆದರೆ ಜಿಲ್ಲಾ ವರಿಷ್ಠಾಧಿಕಾರಿ ಕೆ.ರಾಮರಾಜನ್​ ಈ ಈ ವಿಷಯವನ್ನು ಇನ್ನೂ ಖಿಚಿತಪಡಿಸಿಲ್ಲ.


Spread the love

About Laxminews 24x7

Check Also

ಜ.19 ರಂದು ’12ನೇ ಸತೀಶ್ ಶುಗರ್ಸ್ ಕ್ಲಾಸಿಕ್-2026′ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಬೃಹತ್ ದೇಹದಾರ್ಢ್ಯ ಸ್ಪರ್ಧೆ; ಅಜೀತ್ ಸಿದ್ಧನ್ನವರ

Spread the love ಜ.19 ರಂದು ’12ನೇ ಸತೀಶ್ ಶುಗರ್ಸ್ ಕ್ಲಾಸಿಕ್-2026′ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಬೃಹತ್ ದೇಹದಾರ್ಢ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ