Breaking News
Home / Uncategorized / ‘ಸಾಮೂಹಿಕ ವಿವಾಹ ನೆಮ್ಮದಿ ಜೀವನಕ್ಕೆ ನಾಂದಿ’

‘ಸಾಮೂಹಿಕ ವಿವಾಹ ನೆಮ್ಮದಿ ಜೀವನಕ್ಕೆ ನಾಂದಿ’

Spread the love

ಶಿರಹಟ್ಟಿ: ಸಾಮೂಹಿಕ ವಿವಾಹಗಳು ದುಂದುವೆಚ್ಚಕ್ಕೆ ಕಡಿವಾಣ ಹಾಕುದುವುದಲ್ಲದೆ, ನೆಮ್ಮದಿ ಜೀವನಕ್ಕೆ ನಾಂದಿ ಹಾಡುತ್ತವೆ ಎಂದು ಮಾಜಿ ಶಾಸಕ ಜಿ.ಎಸ್. ಗಡ್ಡದ್ದೇವರಮಠ ಹೇಳಿದರು.

ಬಸವೇಶ್ವರ ಜಯಂತಿ ಅಂಗವಾಗಿ ಸ್ಥಳೀಯ ಬಿರೇಶ್ವರ ಸೇವಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಮಾತನಾಡಿದರು.

ವಧು-ವರರು ದಾಂಪತ್ಯ ಜೀವನವನ್ನು ಮಾದರಿಯಾಗಿ ನಡೆಸುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಎಂದರು.

ಇಂದಿನ ದಿನಮಾನಗಳಲ್ಲಿ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಮದುವೆ ಕಬ್ಬಿಣದ ಕಡಲೆ ಇದ್ದಂತೆ. ಉಳ್ಳವರು ಸಾಮೂಹಿಕ ವಿವಾಹದಂತಹ ಸತ್ಕಾರ್ಯಕ್ಕೆ ಮುಂದಾಗಿ ಬಡವ, ಶ್ರೀಮಂತ, ಮೇಲು, ಕೀಳೇನ್ನದೆ ಎಲ್ಲರೂ ಒಂದೇ ಎನ್ನುವ ಭಾವನೆಯೊಂದಿಗೆ ನಡೆಸುವ ಎಲ್ಲ ಸತ್ಕಾರ್ಯ ಮಾಡಬೇಕು. ಇಂತಹ ಸಾಮಾಜಿಕ ಕಳಕಳಿಯೊಂದಿಗೆ ಸಮಿತಿಯವರು ನಡೆಸುವ ಸಾಮೂಹಿಕ ವಿವಾಹ ಮಹೋತ್ಸವಗಳು ನಿಜಕ್ಕೂ ಶ್ಲಾಘನೀಯ ಎಂದು ಹೇಳಿದರು.

ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಮಾತನಾಡಿದರು. ಎಚ್.ಡಿ.ಮಾಗಡಿ, ಮಂಜುನಾಥ ಘಂಟಿ, ದೇವಪ್ಪ ಬಟ್ಟೂರ, ಗೂಳಪ್ಪ ಕರಿಗಾರ, ರಾಮಣ್ಣ ಕಟ್ಟೆಕಾರ, ಪರಶುರಾಮ ಡೊಂಕಬಳ್ಳಿ, ಮಂಜಪ್ಪ ಹಮ್ಮಿಗಿ ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಇದ್ದರು.


Spread the love

About Laxminews 24x7

Check Also

ಟ್ಯಾಂಕ್ ಮೇಲೆ ಯುವತಿ ಕೂರಿಸಿಕೊಂಡು ಬೈಕ್ ಚಾಲನೆ ಮಾಡಿದ್ದ ಪ್ರೇಮಿ ಅರೆಸ್ಟ್‌!

Spread the love ಬೆಂಗಳೂರು: ಇಂಧನ ಟ್ಯಾಂಕ್ ಮೇಲೆ ಕುಳಿತಿದ್ದ ಮಹಿಳೆಯೊಂದಿಗೆ ಬೈಕ್ ಸವಾರಿ ಮಾಡುತ್ತಿರುವ ಯುವಕನನ್ನು ಹೆಬ್ಬಾಳ ಸಂಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ