Breaking News

ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Spread the love

ದಾಂಡೇಲಿ : ದಾಂಡೇಲಿಯಿಂದ ಹಳಿಯಾಳಕ್ಕೆ ಹೋಗುತ್ತಿದ್ದ ಕಾರು ಮತ್ತು ಹಳಿಯಾಳದಿಂದ ದಾಂಡೇಲಿಗೆ ಬರುತ್ತಿದ್ದ ದ್ವಿಚಕ್ರ ವಾಹನವೊಂದು ದಾಂಡೇಲಿ ತಾಲೂಕಿನ ಕರ್ಕಾ ಆಲೂರು ಮಧ್ಯ ಪರಸ್ಪರ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಸಂಜೆ ನಡೆದಿದೆ.

 

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

ಹಳಿಯಾಳ ತಾಲೂಕಿನ ಮದ್ನಳ್ಳಿ ದುಸಗಿ ನಿವಾಸಿ 28 ವರ್ಷ ವಯಸ್ಸಿನ ಸುನೀಲ್ ಬೋಕ್ನೆಕರ್ ಎಂಬತಾನೇ ಗಂಭೀರ ಗಾಯಗೊಂಡ ದ್ವಿಚಕ್ರವಾಹನ ಸವಾರನಾಗಿದ್ದಾನೆ.

ದಾಂಡೇಲಿಯಿಂದ ಹಳಿಯಾಳಕ್ಕೆ ಹೋಗುತ್ತಿದ್ದ ಕಾರಿಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನದ ಸವಾರ ಸುನೀಲ್ ಬೋಕ್ನೆಕರ್ ಈತನಿಗೆ ಗಂಭೀರ ಗಾಯವಾಗಿದೆ.

ಈ ಅಪಘಾತದಿಂದಾಗಿ ದ್ವಿಚಕ್ರ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡು ದ್ವಿಚಕ್ರ ವಾಹನ ಸಂಪೂರ್ಣ ಸುಟ್ಟು ಹೋಗಿದೆ.

ಗಂಭೀರ ಗಾಯಗೊಂಡ ಸುನೀಲ್ ಬೋಕ್ನೆಕರ್ ಈತನನ್ನು ಧಾರವಾಡದ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ದಾಂಡೇಲಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆಯನ್ನು ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ