Breaking News
Home / Uncategorized / ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ

ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ

Spread the love

ಮೈಸೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಮಾಡುತ್ತಿದೆ. ನಮ್ಮ ಪೊಲೀಸರ ಬಗ್ಗೆ ನಂಬಿಕೆ‌ಯಿದೆ. ನಿಷ್ಪಕ್ಷಪಾತ ತನಿಖೆ ಮಾಡಿ ವರದಿ ಕೊಡುತ್ತಾರೆ‌. ಸಿಬಿಐಗೆ ಪ್ರಕರಣ ವಹಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಆಡಳಿತದಲ್ಲಿ ಸಿಬಿಐಗೆ ಒಂದೇ ಒಂದು ಕೇಸ್ ಕೊಡಲಿಲ್ಲ.

ಬಿಜೆಪಿ ಅವರು ಸಿಬಿಐ ಗೆ ಕರಪ್ಶನ್ ಬ್ಯೂರ್ ಆಫ್ ಇನ್ವೇಸ್ಟಿಗೇಶನ್ ಎನ್ನುತ್ತಿದ್ದರು. ಚೋರ್ ಬಚಾವ್ ಸಂಸ್ಥೆ ಎಂದು ದೇವೇಗೌಡರು ಹೇಳಿದ್ದರು. ಈಗ ನೋಡಿದರೆ ಸಿಬಿಐಗೆ ಕೊಡಿ ಎನ್ನುತ್ತಿದ್ದಾರೆ, ಇದರ ಅರ್ಥ ಏನು? ಸರಿಯಾದ ದಾರಿಯಲ್ಲಿ ತನಿಖೆ ನಡೆಯುತ್ತದೆ ಎಂಬ ನಂಬಿಕೆ ಇದೆ. ನಾನು ಯಾವತ್ತು ಪೊಲೀಸರಿಗೆ ಕಾನೂನಿನ‌ ವಿರುದ್ಧವಾಗಿ ತನಿಖೆ ಮಾಡಿ ಅಂಥ ಹೇಳುವುದಿಲ್ಲ. ಎಸ್‌ಐಟಿ ಮೇಲೆ‌ ನಂಬಿಕೆ‌ ಇಡಬೇಕು. ನಮ್ಮ ಪೊಲೀಸ್ ಮೇಲೆ ಅವರಿಗೆ ನಂಬಿಕೆ ಇಲ್ವಾ ಎಂದು ಪ್ರಶ್ನಿಸಿದರು.Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

ಈ ಹಿಂದೆ ಸಿಬಿಐಗೆ ನಾವೇ ಲಾಟರಿ ಕೇಸ್, ಜಾರ್ಜ್ ಕೇಸ್, ಹಾಗು ಡಿ.ಕೆ ರವಿ ಕೇಸ್ ಕೊಟ್ಟಿದ್ದೇವು. ಆ ಪ್ರಕರಣದಲ್ಲಿ ಯಾರಿಗಾದರೂ ಶಿಕ್ಷೆಯಾಗಿದೆಯೇ? ಹಾಗಂತ ನನಗೆ ಸಿಬಿಐ ಮೇಲೆ ನಂಬಿಕೆ ಇಲ್ಲ ಎಂದರ್ಥವಲ್ಲ. ಈ ಪ್ರಕರಣದಲ್ಲಿ ನಮ್ಮ ಪೊಲೀಸರೇ ತನಿಖೆ ಮಾಡುತ್ತಾರೆ ಎಂದರು.

ಪ್ರಕರಣದಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ, ನನ್ನ ಹಸ್ತಕ್ಷೇಪ ಕೂಡ ಇಲ್ಲ. ಪೊಲೀಸರ ಮೇಲೆ ವಿಶ್ವಾಸ ಇದೆ. ಸತ್ಯ ಸತ್ಯಾತೆ ಹೊರಗೆ ಬರುತ್ತದೆ. ಪ್ರಕರಣಕ್ಕೆ ಅಂತರಾಷ್ಟ್ರೀಯ ಸಂಕರ್ಪ ಇದೆ ಎಂಬುದೆಲ್ಲಾ ನಿಜವಲ್ಲ. ಈ ಪ್ರಕರಣವನ್ನು ಸಿಬಿಐಗೆ ವಹಿಸಲಿ ಎನ್ನುವ ಕಾರಣಕ್ಕೆ ಈ ರೀತಿ ಹೇಳುತ್ತಿದ್ದಾರೆ ಅಷ್ಟೇ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಅರ್ಜಿ ತಿರಸ್ಕಾರವಾಗಿದ್ದು ಯಾಕೆ?

ಮಾಜಿ ಸಚಿವ ಎಚ್.ಡಿ ರೇವಣ್ಣ ಬಂಧನ ವಿಚಾರಕ್ಕೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಏನು ಕೇಸ್ ಇಲ್ಲ ಎಂದ ಮೇಲೆ ನಿರೀಕ್ಷಣಾ ಜಾಮೀನಿಗೆ ಯಾಕೆ ಅರ್ಜಿ ಹಾಕಿದ್ದರು. ಇದರಲ್ಲಿ ರಾಜಕೀಯ ಎಲ್ಲಿಂದ ಬಂತು? ಅಪರಾಧವಾಗಿಲ್ಲ ಎಂದಾದರೆ ಜಾಮೀನು ಅರ್ಜಿ ಯಾಕೆ ತಿರಸ್ಕಾರ ಆಗಿದೆ ಎಂದರು.


Spread the love

About Laxminews 24x7

Check Also

ಟ್ಯಾಂಕ್ ಮೇಲೆ ಯುವತಿ ಕೂರಿಸಿಕೊಂಡು ಬೈಕ್ ಚಾಲನೆ ಮಾಡಿದ್ದ ಪ್ರೇಮಿ ಅರೆಸ್ಟ್‌!

Spread the love ಬೆಂಗಳೂರು: ಇಂಧನ ಟ್ಯಾಂಕ್ ಮೇಲೆ ಕುಳಿತಿದ್ದ ಮಹಿಳೆಯೊಂದಿಗೆ ಬೈಕ್ ಸವಾರಿ ಮಾಡುತ್ತಿರುವ ಯುವಕನನ್ನು ಹೆಬ್ಬಾಳ ಸಂಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ