ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಪತನಗೊಳ್ಳಲಿದೆ ಎಂಬ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿಯವರ ಹೇಳಿಕೆಗೆ ಸಚಿವ ಎಂ.ಬಿ. ಪಾಟೀಲ್ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಬೀಳಿಸಬೇಕೆಂದರೆ ಅರವತ್ತು ಶಾಸಕರು ಬೇಕು.ಆದರೆ ಬಿಜೆಪಿ ಶಾಸಕರುಗಳೇ ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಇನ್ನು ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಹೇಳಿದ ಸಚಿವ ಎಂ.ಬಿ. ಪಾಟೀಲ್, ರಾಜ್ಯದಲ್ಲಿ ನಾವು ಕನಿಷ್ಠ 20 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ತಿಳಿಸಿದ್ದಾರೆ.
Laxmi News 24×7