Breaking News

ಸದ್ಯದಲ್ಲೇ ಕೊರೋನಾ ಲಸಿಕೆ,,,!

Spread the love

ಬೆಂಗಳೂರು: ಸದ್ಯದಲ್ಲೇ ಕೊರೋನಾ ಲಸಿಕೆಯ ಗುಡ್‍ನ್ಯೂಸ್ ಸಿಗುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಕೋರೋನಾ ಲಸಿಕೆ ಹಂಚಿಕೆ, ಸುರಕ್ಷಿತ ಸಂಗ್ರಹಕ್ಕೆ ಆರೋಗ್ಯ ಇಲಾಖೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಈಗಾಗಲೇ ಲಸಿಕೆ ವಿತರಿಸಲು ಮಾಡಿಕೊಂಡಿರುವ ವ್ಯವಸ್ಥೆಗಳ ಕುರಿತು ಅಂಕಿ ಅಂಶ ಸಮೇತ ಕೇಂದ್ರಕ್ಕೆ ಮಾಹಿತಿ ನೀಡಿದೆ. ಸಾರ್ವಜನಿಕರಿಗೆ ಕೊರೋನಾ ಲಸಿಕೆ ನೀಡಲು ರಾಜ್ಯ ರೆಡಿ ಇದೆ ಎಂಬ ಸಂದೇಶ ರವಾನಿಸಿದೆ.ಈಗಾಗಲೇ ಲಸಿಕೆ ಸ್ಟೋರೇಜ್‍ಗೆ ಬೆಂಗಳೂರಿನ ದಾಸಪ್ಪ ಆಸ್ಪತ್ರೆ, ಬಾಗಲಕೋಟೆಯ ಜಿಲ್ಲಾಸ್ಪತ್ರೆ ಸೇರಿದಂತೆ ರಾಜ್ಯದ ಎಲ್ಲಾ ಜಿಲಾಸ್ಪತ್ರೆಗಳಲ್ಲಿ ಲಸಿಕೆಯನ್ನು ಸಂಗ್ರಹಿಸಿಡಲು ಕೋಲ್ಡ್ ಸ್ಟೋರೇಜ್ ವ್ಯವಸ್ಥೆ ಮಾಡಿಕೊಳ್ಳುತ್ತಿದೆ.

ಸಿದ್ಧತೆ ಏನು?
* ರಾಜ್ಯದ ಎರಡು ಕಡೆ ಬೃಹತ್ ಫ್ರೀಜರ್‌ಗಳ  ವ್ಯವಸ್ಥೆ (ಸಜ್ಜುಗೊಳಿಸಲಾಗ್ತಿದೆ)
* ರಾಜ್ಯದಲ್ಲಿರುವ ಬೃಹತ್ ಕೋಲ್ಡ್ ಸ್ಟೋರೇಜ್ – 10
* ರಾಜ್ಯದಲ್ಲಿರುವ ಕೋಲ್ಡ್ ಬಾಕ್ಸ್ – 3426
* ವ್ಯಾಕ್ಸಿನ್ ಕ್ಯಾರಿಯರ್ ಬಾಕ್ಸ್ – 55,347
* ಬಳಕೆಯಲ್ಲಿರುವ ಸ್ಟೆಬಿಲೈಜರ್ ಸಂಖ್ಯೆ – 6144
* ಬೆಂಗಳೂರಿನ 84 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋಲ್ಡ್ ಸ್ಟೋರೇಜ್ ಯೂನಿಟ್
* ಬಿಬಿಎಂಪಿ ಬಳಿ 175 ರೆಫ್ರಿಜರೇಟರ್, 150 ಡೀಪ್ ಫ್ರೀಜರ್
* ಬೆಂಗಳೂರಿನ 94 ಸಾವಿರ ಕೋರೋನಾ ವಾರಿಯರ್ಸ್‍ಗೆ ಮೊದಲು ಲಸಿಕೆ
* ಉಚಿತವಾಗಿ ಕೊರೋನಾ ಲಸಿಕೆ ಹಂಚಿಕೆ


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ