Breaking News

ಎನ್‌ಇಪಿ ರದ್ದತಿಯಿಂದ ಉನ್ನತ ಶಿಕ್ಷಣಕ್ಕೆ ಆಪತ್ತು: ಅರುಣ ಶಹಾಪುರ

Spread the love

ಮಂಗಳೂರು: ‘ರಾಷ್ಟ್ರೀಯ ಶಿಕ್ಷಣ ನೀತಿ-2020 (ಎನ್‌ಇಪಿ) ಭಾಗವಾಗಿದ್ದ ನಾಲ್ಕು ವರ್ಷಗಳ ಪದವಿ ಸ್ಥಗಿತಗೊಳಿಸಿ, 3 ವರ್ಷಗಳ ಪದವಿ ಕೋರ್ಸ್‌ಗೆ ಸುತ್ತೋಲೆ ಹೊರಡಿಸಿರುವ ರಾಜ್ಯ ಸರ್ಕಾರದ ಕ್ರಮ ವಿದ್ಯಾರ್ಥಿಗಳಿಗೆ ಅಷ್ಟೇ ಅಲ್ಲ, ವಿಶ್ವವಿದ್ಯಾಲಯಗಳಿಗೂ ಆಪತ್ತು ತರಲಿದೆ’ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಅರುಣ ಶಹಾಪುರ ಎಚ್ಚರಿಸಿದರು.

ಪೀಪಲ್ಸ್‌ ಫೋರಂ ಫಾರ್‌ ಕರ್ನಾಟಕ ಎಜುಕೇಷನ್‌ ವತಿಯಿಂದ ಶುಕ್ರವಾರ ಇಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ರಾಷ್ಟ್ರೀಯ ಶಿಕ್ಷಣ ನೀತಿ-2020 ಜಾರಿಗೊಳಿಸದಿದ್ದರೆ ಸಂಶೋಧನೆಗಾಗಿ ಕೇಂದ್ರದಿಂದ ಬರುವ ಅನುದಾನ ವಿಶ್ವವಿದ್ಯಾಲಯಗಳಿಗೆ ಕೈತಪ್ಪುವ ಸಾಧ್ಯತೆ ಇದೆ ಎಂದೂ ಅವರು ಎಚ್ಚರಿಸಿದರು.

‘ನಾಲ್ಕು ವರ್ಷಗಳ ಪದವಿ ಪೂರೈಸಿದವರು ನೇರವಾಗಿ ಪಿಎಚ್‌.ಡಿಗೆ ಪ್ರವೇಶ ಪಡೆಯಬಹುದು ಎಂದು ಯುಜಿಸಿ ಸುತ್ತೋಲೆ ಹೊರಡಿಸಿದೆ. ಈ ಹೊತ್ತಿನಲ್ಲಿ ರಾಜ್ಯ ಸರ್ಕಾರದ ಈ ನಿರ್ಧಾರ ಸರಿಯಲ್ಲ. ಎನ್‌ಇಪಿ ಜಾರಿಗೂ ಮೊದಲು ಪ್ರವೇಶ ಪಡೆದವರು, ಎನ್‌ಇಪಿ ಅಡಿ ಪ್ರವೇಶ ಪಡೆದವರು ಹಾಗೂ ಈಗ ಎಸ್‌ಇಪಿ ಅಡಿ ಪ್ರವೇಶ ಪಡೆಯುವವರಿಗೆ ಹೀಗೆ ಮೂರು ರೀತಿಯ ಪರೀಕ್ಷೆಗಳನ್ನು ನಡೆಸಬೇಕಾಗುತ್ತದೆ. ಅದಕ್ಕೆ ನಮ್ಮ ವಿಶ್ವವಿದ್ಯಾಲಯಗಳು ಆರ್ಥಿಕವಾಗಿ ಸಮರ್ಥವಾಗಿವೆಯೇ’ ಎಂದು ಅವರು ಪ್ರಶ್ನಿಸಿದರು.

ಪಠ್ಯ ಪರಿಷ್ಕರಣೆ: ದೇಶದಲ್ಲಿ 2023ರ ಪಠ್ಯಕ್ರಮ ಚೌಕಟ್ಟಿನ ಆಧಾರದ ಮೇಲೆ ಪಠ್ಯಕ್ರಮವನ್ನು ಪರಿಷ್ಕರಿಸಲಾಗುತ್ತಿದೆ. ಆದರೆ, ರಾಜ್ಯ ಸರ್ಕಾರ ಶಾಲಾ ಪಠ್ಯಕ್ರವನ್ನು 2007ರ ಪಠ್ಯಕ್ರಮದ ಚೌಕಟ್ಟಿನ ಆಧಾರದ ಮೇಲೆ ಪರಿಷ್ಕರಿಸುತ್ತಿದೆ. ಇದು ಸರಿಯಾದ ಕ್ರಮವಲ್ಲ ಎಂದು ಅವರು ಹೇಳಿದರು. ಶೈಕ್ಷಣಿಕ ಅಗತ್ಯತೆಗೆ ತಕ್ಕಂತೆ ಪಠ್ಯಕ್ರಮವನ್ನು ಇನ್ನೂ ಉತ್ತಮಪಡಿಸುವುದಾದರೆ ಸರಿ, ರಾಜಕೀಯ ಕಾರಣಕ್ಕಾಗಿ ರಾಜ್ಯ ಸರ್ಕಾರ ಪಠ್ಯ ಪರಿಷ್ಕರಣೆ ಮಾಡುತ್ತಿರುವುದು ಸರಿಯಲ್ಲ ಎಂದು ಅವರು ಪ್ರತಿಪಾದಿಸಿದರು.

ಪೀಪಲ್ಸ್‌ ಫೋರಂ ಫಾರ್‌ ಕರ್ನಾಟಕ ಎಜ್ಯುಕೇಶನ್‌ನ
ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸಂಚಾಲಕ ಪ್ರೊ. ರಾಜಶೇಖರ ಹೆಬ್ಬಾರ, ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್‌ನ ಮಾಜಿ ಸದಸ್ಯ ರಮೇಶ ಕೆ. ಪತ್ರಿಕಾಗೋಷ್ಠಿಯಲ್ಲಿ ಇದ್ದರು.


Spread the love

About Laxminews 24x7

Check Also

ರಾಯಬಾಗ: ರೇಬಿಸ್ ಲಸಿಕಾ ಅಭಿಯಾನಕ್ಕೆ ಚಾಲನೆ

Spread the love ರಾಯಬಾಗ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ರಾಮಕೃಷ್ಣ ಪಬ್ಲಿಕ್ ಸ್ಕೂಲ್ ಬೆಕ್ಕೇರಿ ಇವರ ಸಹಯೋಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ