Breaking News

ಲೋಕದ ಡೊಂಕು ನೀವೇಕೆ ತಿದ್ದುವಿರಿ, ನಿಮ್ಮ ಮನೆಯನ್ನು ಸರಿ ಮಾಡಿಕೊಳ್ಳಿ

Spread the love

ಬೆಂಗಳೂರು: ಲೋಕದ ಡೊಂಕನ್ನು ನೀವೇಕೆ ತಿದ್ದುವಿರಿ, ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ, ನಿಮ್ಮ, ನಿಮ್ಮ ಮನವ ಸಂತೈಸಿಕೊಳ್ಳಿ…ಇದು ತನ್ನನ್ನು ಸಂಪುಟದಿಂದ ಕೈಬಿಡಲು ಮುಖ್ಯಮಂತ್ರಿಗೆ ಸೂಚಿಸುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿಗೆ ಉಪ ಮುಖ್ಯಮಂತ್ರಿ ಡಿ.ಕೆ.

ಶಿವಕುಮಾರ್‌ ನೀಡಿದ ತಿರುಗೇಟು ಇದು.

D.K. Shivakumar ಲೋಕದ ಡೊಂಕು ನೀವೇಕೆ ತಿದ್ದುವಿರಿ, ನಿಮ್ಮ ಮನೆಯನ್ನು ಸರಿ ಮಾಡಿಕೊಳ್ಳಿ

ವಿಧಾನಸೌಧ ಆವರಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರ ಬಳಿಗೆ ಹೋಗಿರುವವರಿಗೆ ಒಳ್ಳೆಯದಾಗಲಿ. ಆದರೆ ಅದಕ್ಕೂ ಮೊದಲು ಬೇರೆಯವರ ಸಂಗತಿ ಅವರಿಗೆ ಯಾಕೆ ಬೇಕು ಎಂದು ಪ್ರಶ್ನಿಸಿದರು.

ಪ್ರಜ್ವಲ್‌ ಲೈಂಗಿಕ ಹಗರಣದಲ್ಲಿ ಯಾವುದೇ ಸಂತ್ರಸ್ತೆಯರು ದೂರು ನೀಡಿಲ್ಲ ಎನ್ನುವ ಕೇಂದ್ರ ಮಹಿಳಾ ಆಯೋಗದ ಹೇಳಿಕೆ ಬಗ್ಗೆ ಕೇಳಿದಾಗ, ಈಗಲಾದರೂ ಕೇಂದ್ರ ಮಹಿಳಾ ಆಯೋಗ ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದೆ ಎಂಬುದೇ ಸಮಾಧಾನದ ಸಂಗತಿ. ಆಯೋಗದ ಹೇಳಿಕೆ ವಿಚಾರ ನನಗೂ ಮಾಧ್ಯಮಗಳ ಮೂಲಕ ತಿಳಿಯಿತು. ಉತ್ತರ ನೀಡುವುದು ನನ್ನ ಕೆಲಸವಲ್ಲ, ಅದಕ್ಕೆ ಪೊಲೀಸ್‌ ಇಲಾಖೆ ಹಾಗೂ ತನಿಖಾಧಿಕಾರಿಗಳು ಸ್ಪಷ್ಟನೆ ನೀಡಲಿದ್ದಾ ರೆ ಎಂದರು.

ಎಸ್‌ಐಟಿ ಅಧಿಕಾರಿಗಳನ್ನು ಯಾವುದೇ ಸಂತ್ರಸ್ತರು ಬಂದು ಭೇಟಿ ಮಾಡಿಲ್ಲ ಎಂದು ಹೇಳಿರುವ ಬಗ್ಗೆ ಗಮನ ಸೆಳೆದಾಗ, ಸಂತ್ರಸ್ತೆಯರಿಗೆ ಪ್ರಭಾವಿ ರಾಜಕಾರಣಿಗಳಿಂದ ಬೆದರಿಕೆ, ಅಪಾಯ ಇದೆ ಎನ್ನುವ ಭಯವಿದೆ. ಹೀಗಿರುವಾಗ, ಅವರು ಬಂದು ಯಾಕೆ ಭೇಟಿ ಮಾಡುತ್ತಾರೆ ಎಂದು ಕೇಳಿದರು.


Spread the love

About Laxminews 24x7

Check Also

ಜ.19 ರಂದು ’12ನೇ ಸತೀಶ್ ಶುಗರ್ಸ್ ಕ್ಲಾಸಿಕ್-2026′ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಬೃಹತ್ ದೇಹದಾರ್ಢ್ಯ ಸ್ಪರ್ಧೆ; ಅಜೀತ್ ಸಿದ್ಧನ್ನವರ

Spread the love ಜ.19 ರಂದು ’12ನೇ ಸತೀಶ್ ಶುಗರ್ಸ್ ಕ್ಲಾಸಿಕ್-2026′ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಬೃಹತ್ ದೇಹದಾರ್ಢ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ