Breaking News

SSLC ಪರೀಕ್ಷೆ-2′ ನೋಂದಣಿಗೆ ಮೇ 24ರ ವರೆಗೆ ಅವಕಾಶ

Spread the love

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ವೇಳಾಪಟ್ಟಿ, ನೋಂದಣಿಗಾಗಿ ಅರ್ಜಿಯನ್ನು ನೀಡಲಾಗಿದೆ. ನುತ್ತೀರ್ಣಗೊಂಡ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಮೇ 9ರಿಂದ ಎಲ್ಲಾ ದಾಖಲೆಗಳನ್ನು ಒಳಗೊಂಡು ಮೇ 24ರೊಳಗೆ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಈ ಜಾಲತಾಣವನ್ನು https://kseab.

karnataka.gov.in ಹಾಗೂ ಸಹಾಯವಾಣಿ 080- 23310075/76 ಸಂಪರ್ಕಿಸಬಹುದು ಎಂದು ಮಂಡಳಿ ನಿರ್ದೇಶಕ(ಪರೀಕ್ಷೆಗಳು) ಎಚ್.ಎನ್.ಗೋಪಾಲಕೃಷ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

2002-03 ರಿಂದ 2023-24ರ ಎಸ್.ಎಸ್.ಎಲ್.ಸಿ ಪರೀಕ್ಷೆವರೆಗೆ ಪೂರ್ಣಗೊಳಿಸಲಾಗಿಲ್ಲದ [Not Completed] ಹಾಗೂ 2024ರ ಪರೀಕ್ಷೆ-1ಕ್ಕೆ ನೋಂದಾಯಿಸಿಕೊಂಡು ಗೈರು ಹಾಜರಾಗಿರುವ ಅರ್ಹ 2 https://kseab.karnataka.gov.in ಜಾಲತಾಣದ ಶಾಲಾ ಲಾಗಿನ್ ಮೂಲಕ ಪರೀಕ್ಷೆ-2ಕ್ಕೆ ನೋಂದಣಿ ಮಾಡುವುದು. ಶಾಲಾ ಲಾಗಿನ್‌ನಲ್ಲಿ Registration for 2024 Exam-2 5 ENTER REGISTER NUMBER ಆಯ್ಕೆ ದೊರಕುತ್ತದೆ. ಈ ಆಯ್ಕೆಯಲ್ಲಿ ವಿದ್ಯಾರ್ಥಿಗಳ ನೋಂದಣೆ ಸಂಖ್ಯೆಯನ್ನು ನಮೂದು ಮಾಡಲು ಅವಕಾಶ ನೀಡಲಾಗಿದೆ. ಪರೀಕ್ಷೆಗೆ ನೋಂದಾಯಿಸಿಕೊಳ್ಳುವ ವಿದ್ಯಾರ್ಥಿಯ ನೋಂದಣೆ ಸಂಖ್ಯೆಯನ್ನು ನಮೂದು ಮಾಡಿ Submit ಕೊಟ್ಟಾಗ ಆ ವಿದ್ಯಾರ್ಥಿಯ ವಿವರಗಳು, ವಿದ್ಯಾರ್ಥಿಯ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಮಾಧ್ಯಮ, ದೈಹಿಕ ಸ್ಥಿತಿ, ಜನ್ಮ ದಿನಾಂಕ, ಪರೀಕ್ಷೆ ತೆಗೆದುಕೊಳ್ಳುತ್ತಿರುವ ವಿಷಯಗಳು ತೆರೆದುಕೊಳ್ಳುತ್ತವೆ. ಇವುಗಳಲ್ಲಿ ಯಾವುದೇ ಬದಲಾವಣೆ ಮಾಡಲು ಅವಕಾಶವಿರುವುದಿಲ್ಲ.

2021-22 ಮತ್ತು 2022-23 ನೇ ಸಾಲಿನಲ್ಲಿ ಪರೀಕ್ಷೆ ಬರೆದು ಅನುತ್ತೀರ್ಣಗೊಂಡ ವಿದ್ಯಾರ್ಥಿಗಳ ಹಾಗೂ ಮಾರ್ಚ್/ಏಪ್ರಿಲ್ 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-1 ಕ್ಕೆ ನೋಂದಾಯಿಸಿಕೊಂಡು ಪೂರ್ಣಗೊಳಿಸಲಾಗಿಲ್ಲದ [Not Completed] ವಿದ್ಯಾರ್ಥಿಗಳ ಭಾವಚಿತ್ರ ಮತ್ತು ಸಹಿಗಳು ಮಂಡಳಿಯಲ್ಲಿ ಲಭ್ಯವಿದ್ದು, ಸದರಿ ಅಭ್ಯರ್ಥಿಗಳು ಈ ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡಲ್ಲಿ ಪುನ: ಇವರುಗಳ ಭಾವಚಿತ್ರ ಮತ್ತು ಸಹಿಗಳನ್ನು ಅಪ್‌ಲೋಡ್ ಮಾಡುವ ಅವಶ್ಯಕತೆ ಇರುವುದಿಲ್ಲ.

2. 2002ರ ಹಿಂದಿನ ವರ್ಷಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ನೋಂದಾಯಿಸಲು ಈ ಹಿಂದೆ ಇದ್ದಂತೆ MSA ಅರ್ಜಿಗಳನ್ನು ಭರ್ತಿ ಮಾಡಿ ಅರ್ಜಿ ಮೂಲಕ ಸಲ್ಲಿಸಬಹುದಾಗಿದೆ. ಈ ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲಿ ನೋಂದಾಯಿಸಲು ಅವಕಾಶ ಕಲ್ಪಿಸಲಾಗಿರುವುದಿಲ್ಲ. ಇಂತಹ ಅಭ್ಯರ್ಥಿಗಳ ಎಂ.ಎಸ್.ಎ ಫಾರಂನಲ್ಲಿ ವಿದ್ಯಾರ್ಥಿಯ ಇತ್ತೀಚಿನ ಪಾಸ್‌ಫೋರ್ಟ್ ಅಳತೆಯ 2 ಭಾವಚಿತ್ರಗಳನ್ನು ಅಂಟಿಸಿ ಧೃಡೀಕರಿಸಿ ಸಲ್ಲಿಸಬೇಕು. ಎಂ.ಎಸ್.ಎ ಅರ್ಜಿಗಳನ್ನು ಪರಿಶೀಲಿಸುವಾಗ ಎಂ.ಎಸ್.ಎ ನಲ್ಲಿರುವ ಶಾಲಾ ಸಂಕೇತವು ತಮ್ಮ ಶಾಲೆಯದೇ ಎಂಬುದನ್ನು ಖಚಿತಪಡಿಸಿಕೊಳ್ಳುವುದು. ಈ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು ನಿಗದಿತ ಬ್ಯಾಂಕ್ NEFT ಚಲನ್ ಮೂಲಕ ಪಾವತಿಸಿ ಎಂ.ಎಸ್.ಎ ಅರ್ಜಿ, ಭಾವಚಿತ್ರ, ಶುಲ್ಕ ಪಾವತಿಯ ಚಲನ್‌ನೊಂದಿಗೆ ಮಂಡಳಿಗೆ ಸಲ್ಲಿಸುವುದು. ಈ ಮೂರು ಮಾಹಿತಿಗಳಿದ್ದಲ್ಲಿ ಮಾತ್ರ ಅರ್ಜಿಗಳನ್ನು ಪರಿಗಣಿಸಲಾಗುವುದು. ಇಲ್ಲವಾದಲ್ಲಿ ವಿದ್ಯಾರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ. ಒಂದು ವೇಳೆ ಈ ವಿದ್ಯಾರ್ಥಿಗಳ ಎಂ.ಎಸ್.ಎ ಗಳು ಶಾಲೆಯಲ್ಲಿ ಲಭ್ಯವಿಲ್ಲದಿದ್ದಲ್ಲಿ ಮಂಡಳಿಯ ವಿಭಾಗೀಯ ಕಛೇರಿಗಳಿಂದ ನಿಗಧಿತ ಶುಲ್ಕ ಪಾವತಿಸಿ ಪಡೆದು ಸಲ್ಲಿಸುವುದು ಕಡ್ಡಾಯ.


Spread the love

About Laxminews 24x7

Check Also

ತಂದೆಗೆ ಲಿವರ್ ದಾನ ಮಾಡಿ ಮಹಾದಾನಿ ಆದ ಮಗ

Spread the loveಬೆಳಗಾವಿ: ಲಿವರ್ ಸಂಪೂರ್ಣವಾಗಿ ನಿಷ್ಕ್ರೀಯವಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ರೋಗಿಗೆ ಯಶಸ್ವಿ ಲಿವರ್ ಕಸಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಿ ಜೀವವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ