Breaking News

ಗುಡುಗು ಸಹಿತ ಭಾರೀ ಮಳೆ! ಸಿಡಿಲು ಬಡಿದು ಓರ್ವ ಬೈಕ್ ಸವಾರ ಸಾವು

Spread the love

ಬಾಗಲಕೋಟೆ: ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಕೆಲವೆಡೆ ಗುಡುಗು, ಮಿಂಚು ಸಹಿತ ಮಳೆ ಸುರಿಯುತ್ತಿದೆ. ಇಂದು ಬಾಗಲಕೋಟೆ ಜಿಲ್ಲೆಯ ಕೆಲವು ಭಾಗಗಳಲ್ಲಿ ಮಳೆ, ಗಾಳಿ, ಮಿಂಚು, ಗುಡುಗಿನ‌ ಅಬ್ಬರ ಜೋರಾಗಿದ್ದು, ಸಿಡಿಲು ಬಡಿದು ಓರ್ವ ಬೈಕ್ ಸವಾರ ಸಾವಿಗೀಡಾಗಿದ್ದಾರೆ.

ಬಾಗಲಕೋಟೆಯಲ್ಲಿ ಗುಡುಗು ಸಹಿತ ಭಾರೀ ಮಳೆ! ಸಿಡಿಲು ಬಡಿದು ಓರ್ವ ಬೈಕ್ ಸವಾರ ಸಾವು

ಜಿಲ್ಲೆಯಲ್ಲಿ ಮಳೆಗಿಂತ ಗುಡುಗು, ಸಿಡಿಲಿನ ಆರ್ಭಟ ಜೋರಾಗಿದ್ದು, ಮೃತ ಬೈಕ್​ ಸವಾರನನ್ನು ಪ್ರಕಾಶ್ ವಗ್ಗರ್ (21) ಎಂದು ಗುರುತಿಸಲಾಗಿದೆ. ಪ್ರಕಾಶ್ ಮೂಲತಃ ವಿಜಯಪುರ ಜಿಲ್ಲೆಯ ಗೋನಾಳ ಗ್ರಾಮದವರು ಎನ್ನುತ್ತಿದೆ ಪ್ರಾಥಮಿಕ ಮಾಹಿತಿ. ಪ್ರಕಾಶ್ ಬಾಗಲಕೋಟೆ ತಾಲೂಕಿನ ಬೇವೂರ ಗ್ರಾಮದಲ್ಲಿ ನೆಲೆಸಿದ್ದರು ಎಂದು ವರದಿಯಾಗಿದೆ.

ಸದ್ಯ ಜಿಲ್ಲೆಯಲ್ಲಿ ಜಿಟಿಜಿಟಿ ಮಳೆ ಮುಂದುವರೆದಿದ್ದು, ಮಿಂಚು, ಸಿಡಿಲು ಮಾತ್ರ ಕಡಿಮೆಯಾಗಿಲ್ಲ ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ