Breaking News
white shape of body and blood stains on asphalt texture

ಪತ್ನಿಕೊಂದ ಪಾಪಿ ಗಂಡ, ಮಗು ಬಚಾವ್

Spread the love

ಕೊರಟಗೆರೆ, ನ.19- ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿ ಮಗುವಿನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಾಂದ್‍ಪಾಷನ ಪೈಶಾಚಿಕ ಕೃತ್ಯಕ್ಕೆ ಸಾವನ್ನಪ್ಪಿದ ಮಹಿಳೆಯನ್ನು ಜಬೀನಾ (32) ಎಂದು ಗುರುತಿಸಲಾಗಿದೆ.

ತಂದೆಯಿಂದ ತೀವ್ರವಾಗಿ ಗಾಯಗೊಂಡಿರುವ 9 ವರ್ಷದ ಮಹಮದ್ ಆಲಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊರಟಗೆರೆ ಪಟ್ಟಣದ ರೇಣುಕಾ ಆಸ್ಪತ್ರೆಯ ಹಿಂಭಾಗ ವಾಸಿಸುತ್ತಿದ್ದ ದಂಪತಿ ಪ್ರತಿ ನಿತ್ಯ ಜಗಳವಾಡುತ್ತಿದ್ದರು. ಇಂದು ಮುಂಜಾನೆ ಸತಿ-ಪತಿಯರ ಜಗಳ ವಿಕೋಪಕ್ಕೆ ತೆರಳಿ ಪತಿ ಜಬೀನಾಳ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬಿಡಿಸಿಕೊಳ್ಳಲು ಬಂದ ತನ್ನ ಮಗನ ಮೇಲೂ ದೊಣ್ಣೆಯಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ