ತಾಯಂದಿರ ದಿನದ ಆ ಪ್ರಯುಕ್ತ ತಾಯಿಯ ಜೊತೆ ದೇವಸ್ಥಾನಕ್ಕೆ ಹೋಗಿ ವಾಪಸ್ಸು ಬರುವ ಸಂದರ್ಭದಲ್ಲಿ ನಟ ಚೇತನ್ ಚಂದ್ರ ಅವರ ಮೇಲೆ ಕೆಲವು ಕಿಡಿಗೇಡಿಗಳು ಹಲ್ಲೆ ಮಾಡಿದ್ದಾರೆ. ನಟನ ಕಾರಿಗೂ ಹಾನಿ ಮಾಡಿದ್ದಾರೆ. ಮಾರಣಾಂತಿಕವಾಗಿ ಹಲ್ಲೆಗೆ ಒಳಗಾಗಿರುವ ಚೇತನ್ ಚಂದ್ರ ಅವರು ಕಗ್ಗಲಿಪುರ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದಾರೆ.
ಕನ್ನಡದ ಹಲವು ಸಿನಿಮಾಗಳಲ್ಲಿ ಅಭಿನಯಿಸಿರುವ ನಟ ಚೇತನ್ ಚಂದ್ರ (Chetan Chandra) ಅವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಬೆಂಗಳೂರಿನ ಕಗ್ಗಲಿಪುರ ಸಮೀಪ ಈ ಘಟನೆ ನಡೆದಿದೆ. ಸುಮಾರು 20 ಜನರು ಚೇತನ್ ಚಂದ್ರ ಅವರ ಕಾರನ್ನು ಅಡ್ಡಗಟ್ಟಿ ಹಲ್ಲೆ (Assault) ನಡೆಸಿದ್ದಾರೆ. ನಂತರ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಳ್ಳುವ ಮೂಲಕ ಚೇತನ್ ಚಂದ್ರ ಅವರು ಘಟನೆ ಬಗ್ಗೆ ವಿವರ ನೀಡಿದ್ದಾರೆ. ಹಲ್ಲೆಗೆ ಒಳಗಾದ ಬಳಿಕ ಅವರು ಕಗ್ಗಲಿಪುರ (Kaggalipura) ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಇಂದು (ಮೇ 12) ತಾಯಂದಿರ ದಿನ. ಆ ಪ್ರಯುಕ್ತ ತಾಯಿಯನ್ನು ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ ವಾಪಸ್ ಬರುವಾಗ ಚೇತನ್ ಚಂದ್ರ ಅವರ ಮೇಲೆ ಕಿಡಿಗೇಡಿಗಳು ಹಲ್ಲೆ ಮಾಡಿದ್ದಾರೆ. ಅವರ ಕಾರಿಗೂ ಹಾನಿ ಮಾಡಲಾಗಿದೆ. ಈ ಘಟನೆ ಯಾವ ರೀತಿ ನಡೆಯಿತು ಎಂದು ಇನ್ಸ್ಟಾಗ್ರಾಮ್ ಲೈವ್ನಲ್ಲಿ ಚೇತನ್ ಚಂದ್ರ ಅವರು ಮಾಹಿತಿ ನೀಡಿದ್ದಾರೆ.