ರಾಯಚೂರು: ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಸೋಮವಾರ ಭಾರಿ ಮಳೆಯಾಗಿದೆ.
ಗುಡುಗು ಮಿಂಚು ಸಹಿತ ಬೆಳಗಿನ ಜಾವ ಆರಂಭವಾದ ಮಳೆ ಬೆಳಿಗ್ಗೆ 6 ಗಂಟೆಯ ವರೆಗೂ ಸುರಿದಿದೆ. ಗಟಾರುಗಳು ತುಂಬಿ ರಸ್ತೆ ಮೇಲೆ ನೀರು ಹರಿದಿದೆ. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದೆ.

ತಗಡಿನ ಮನೆಗಳಲ್ಲಿ ನೀರು ಸೋರಿಕೆಯಾಗಿ ಮನೆಗಳಲ್ಲಿ ಸಾಮಗ್ರಿಗಳು ತೊಯ್ದಿವೆ. ತಗ್ಗು ಪ್ರದೇಶಗಳಲ್ಲಿ ಮನೆಗಳಿಗೆ ನುಗ್ಗಿದ ನೀರನ್ನು ಹೊರಗೆ ತೆಗೆಯಲು ಜನರು ಭಾರಿ ಪ್ರಯಾಸ ಪಡಬೇಕಾಯಿತು.
ರಾಯಚೂರಿನ ತರಕಾರಿ ಮಾರುಕಟ್ಟೆಯಲ್ಲಿ ನೀರು ನಿಂತ ಕಾರಣ ರೈತರು ರಸ್ತೆ ಬದಿಗೆ ಕುಳಿತು ತರಕಾರಿ ಮಾರಾಟ ಮಾಡಿದರು
ಹಾಲು, ಪತ್ರಿಕೆ ವಿತರಣೆಯಲ್ಲಿ ವ್ಯತ್ಯಯವಾಗಿದೆ. ತರಕಾರಿ ಮಾರುಕಟ್ಟೆಯಲ್ಲಿ ನೀರು ತುಂಬಿದೆ. ರಾತ್ರಿಯಿಡೀ ವಿದ್ಯುತ್ ಕೈಕೊಟ್ಟಿದೆ. ಮಳೆ ಸುರಿಯುತ್ತಿದ್ದರೂ ಧಗೆ ಕಡಿಮೆಯಾಗಿಲ್ಲ.
ಮಾನ್ವಿ, ಸಿರವಾರ ತಾಲ್ಲೂಕಿನಲ್ಲೂ ಮಳೆ ಮುಂದುವರಿದಿದೆ.
Laxmi News 24×7