Breaking News

ರಾಜ್ಯದ ಎಲ್ಲಾ 31 ಜಿಲ್ಲೆಗಳಲ್ಲೂ ಭಾರೀ ಮಳೆ ಮುನ್ಸೂಚನೆ

Spread the love

ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯ ಆರ್ಭಟಿಸುತ್ತಲೇ ಇದ್ದಾನೆ. ಹಾಗೆಯೇ ಇಂದು (ಮೇ 13) 31 ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಹೆಚ್ಚು ಪ್ರಮಾಣದ ಮಳೆ ಬೀಳಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

Karnataka Rain: ರಾಜ್ಯದ ಎಲ್ಲಾ 31 ಜಿಲ್ಲೆಗಳಲ್ಲೂ ಭಾರೀ ಮಳೆ ಮುನ್ಸೂಚನೆ

ಈಗಾಗಲೇ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಪ್ಪಳ, ಚಾಮರಾಜನಗರ, ಚಿತ್ರದುರ್ಗ, ಧಾರವಾಡ, ಹುಬ್ಬಳ್ಳಿ, ಬೆಳಗಾವಿ ಜಿಲ್ಲೆ ಸೇರಿದಂತೆ ಹಲವೆಡೆ ಅಬ್ಬರದ ಮಳೆಯಾಗಿದೆ. ಹಾಗೆಯೇ ಇಂದು ಕೂಡ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಸಹ ಕಳೆದ ಒಂದು ವಾರದಿಂದ ಮಳೆಯಾಗುತ್ತಲೇ ಇದೆ. ಅಲ್ಲದೆ, ನಗರದ ಹಲವೆಡೆ ಈಗಾಗಲೇ ಮಳೆರಾಯ ಸಾಕಷ್ಟು ಅವಾಂತರಗಳನ್ನೂ ಕೂಡ ಸೃಷ್ಟಿ ಮಾಡಿದ್ದಾನೆ. ಇನ್ನು ಮುಂದಿನ ದಿನಗಳಲ್ಲಿ ಹೀಗೆ ಮಳೆ ಮುಂದುವರೆದರೆ, ಇನ್ನು ಏನೆಲ್ಲ ಅನಾಹುತಗಳು ಆಗುತ್ತವೆ ಎನ್ನುವ ಆತಂಕ ಜನಗರ ಜರದ್ದಾಗಿದೆ.

ಇಂದು (ಮೇ 13) ಕರಾವಳಿ ಕರ್ನಾಟಕ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳು ಘಾಟ್‌ ಪ್ರದೇಶಗಳಲ್ಲಿ ಪ್ರತ್ಯೇಕವಾದ ಭಾರೀ ವ್ಯಾಪಕವಾಗಿ ಭಾರೀ ಮಳೆಯಾಗಲಿದೆ. ಒಟ್ಟು ರಾಜ್ಯದ ಬಹುತೇಕ ಎಲ್ಲ 31 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.


Spread the love

About Laxminews 24x7

Check Also

ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ

Spread the love ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ ಒಂದು ದಿನ ಪಾರ್ವತಿ ದೇವಿಯು ಕೈಲಾಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ