Breaking News

ಡಿಸಿಎಂ ಡಿಕೆಶಿ ಭೇಟಿಯಾದ ಬಿಜೆಪಿ ಶಾಸಕರಾದ ಸೋಮಶೇಖರ್‌, ಹೆಬ್ಬಾರ್‌

Spread the love

ಬೆಂಗಳೂರು,ಮೇ 13- ಲೋಕಸಭಾ ಚುನಾವಣೆ ಮುಗಿದ ಬಳಿಕ ಕಾಂಗ್ರೆಸ್‌‍ನ ಜೊತೆ ಆತೀಯ ಸಖ್ಯ ಹೊಂದಿರುವ ಬಿಜೆಪಿ ಶಾಸಕರು ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರನ್ನು ಭೇಟಿ ಮಾಡಿ ಗಮನ ಸೆಳೆದರು.

ಯಶವಂತಪುರದ ಕ್ಷೇತ್ರದ ಶಾಸಕ ಎಸ್‌‍.ಟಿ.ಸೋಮಶೇಖರ್‌, ಯಲ್ಲಾಪುರ ಕ್ಷೇತ್ರದ ಅರೆಬೈಲು ಶಿವರಾಂ ಹೆಬ್ಬಾರ್‌ ಇಬ್ಬರೂ ಇಂದು ಬೆಳಿಗ್ಗೆ ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್‌ರವರ ಮನೆಗೆ ಭೇಟಿ ನೀಡಿದರು.

ಈ ವೇಳೆ ರಾಜಕೀಯವಾಗಿ ಮಹತ್ವದ ಚರ್ಚೆಗಳು ನಡೆದಿವೆ ಎಂದು ತಿಳಿದುಬಂದಿದೆ.

ಡಿಸಿಎಂ ಡಿಕೆಶಿ ಭೇಟಿಯಾದ ಬಿಜೆಪಿ ಶಾಸಕರಾದ ಸೋಮಶೇಖರ್‌, ಹೆಬ್ಬಾರ್‌

ಆಪರೇಷನ್‌ ಕಮಲಕ್ಕೆ ತುತ್ತಾಗಿ ಕಾಂಗ್ರೆಸ್‌‍ನಿಂದ ಬಿಜೆಪಿಗೆ ಸೇರಿದ್ದ 17 ಶಾಸಕರ ಪೈಕಿ ಪುನರ್‌ ಆಯ್ಕೆಯಾಗಿರುವ ಇನ್ನೂ ಕೆಲವರು ಕಾಂಗ್ರೆಸ್‌‍ನತ್ತ ಮರಳಲು ಆಸಕ್ತಿ ಹೊಂದಿದ್ದಾರೆ ಎನ್ನಲಾಗಿದೆ.

ಈಗಾಗಲೇ ಎಸ್‌‍.ಟಿ.ಸೋಮಶೇಖರ್‌ ಮತ್ತು ಶಿವರಾಂ ಹೆಬ್ಬಾರ್‌ ಕಾಂಗ್ರೆಸ್‌‍ನ ಜೊತೆ ಆತೀಯ ಸಂಬಂಧ ರೂಢಿಸಿಕೊಂಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಅಧಿಕೃತ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡದೇ ತಟಸ್ಥವಾಗಿ ಉಳಿದಿದ್ದರು. ಇನ್ನೂ ಕೆಲವು ಭಾಗಗಳಲ್ಲಿ ಕಾಂಗ್ರೆಸ್‌‍ ಪರವಾಗಿ ಪ್ರಚಾರ ಮಾಡಿದರು ಎಂಬ ಮಾಹಿತಿಗಳು ಇವೆ. ಚುನಾವಣೆಯ ಬಳಿಕ ಈ ಇಬ್ಬರೂ ಶಾಸಕರು ಡಿ.ಕೆ.ಶಿವಕುಮಾರ್‌ರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದು ಕುತೂಹಲ ಕೆರಳಿಸಿದೆ.


Spread the love

About Laxminews 24x7

Check Also

ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ

Spread the love ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ ಒಂದು ದಿನ ಪಾರ್ವತಿ ದೇವಿಯು ಕೈಲಾಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ