Breaking News

ಜೆಎಸ್‌ಡಬ್ಲ್ಯು ದುರಂತ: ಜಿಂದಾಲ್ ಅಧ್ಯಕ್ಷ, ಉಪಾಧ್ಯಕ್ಷರ ಮೇಲೆ ಪ್ರಕರಣ ದಾಖಲಿಸಿ

Spread the love

ಳ್ಳಾರಿ: ‘ಜಿಂದಾಲ್‌ ಸ್ಟೀಲ್‌ ಲಿಮಿಟೆಡ್‌’ನಲ್ಲಿ ಗುರುವಾರ ಸಂಭವಿಸಿದ ದುರಂತಕ್ಕೆ ಸಂಬಂಧಿಸಿದಂತೆ ಕಾರ್ಖಾನೆಯ ಎಚ್‌ಎಸ್‌ಎಂ-03 ಘಟಕದ ಉಸ್ತುವಾರಿ ಉಪಾಧ್ಯಕ್ಷ ಸೇರಿದಂತೆ ಆರು ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯ ಪ್ರಕರಣ ದಾಖಲಿಸಲಾಗಿದೆ.

ದುರಂತದಲ್ಲಿ ಸಾವಿಗೀಡಾಗಿದ್ದ ಹೊಸಪೇಟೆಯ ಭುವನಹಳ್ಳಿಯ ಗಂಟೆ ಜಡಿಯಪ್ಪ ಅವರ ತಮ್ಮ ಮಹೇಂದ್ರ ಅವರು ಘಟನೆಗೆ ಸಂಬಂಧಿಸಿದಂತೆ ತೋರಣಗಲ್‌ ಪೋಲಿಸ್‌ ಠಾಣೆಗೆ ದೂರು ನೀಡಿದ್ದಾರೆ.

ಜೆಎಸ್‌ಡಬ್ಲ್ಯು ದುರಂತ: ಜಿಂದಾಲ್ ಅಧ್ಯಕ್ಷ, ಉಪಾಧ್ಯಕ್ಷರ ಮೇಲೆ ಪ್ರಕರಣ ದಾಖಲಿಸಿ

ದೂರು ಆಧರಿಸಿ, ಎಚ್‌ಎಸ್‌ಎಂ-3 ಘಟಕದ ಉಸ್ತುವಾರಿ ಉಪಾಧ್ಯಕ್ಷ, ಸುರಕ್ಷತೆ ವಿಭಾಗದ ಎವಿಪಿ, ಸುರಕ್ಷತೆ ವಿಭಾಗದ ವ್ಯವಸ್ಥಾಪಕ, ಸಿವಿಲ್ ವಿಭಾಗದ ಅಧಿಕಾರಿ, ಸುರಕ್ಷತೆ ವಿಭಾಗದ ಸೂಪರ್‌ವೈಸರ್, ಮೆಕಾನಿಕಲ್ ವಿಭಾಗದ ಉಸ್ತುವಾರಿ ಅಧಿಕಾರಿ ಸೇರಿದಂತೆ ಆರು ಅಧಿಕಾರಿಗಳ ವಿರುದ್ಧ ಐಪಿಸಿಯ ಸೆಕ್ಷನ್‌ 304(ಎ) (ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾಗುವುದು) ಪ್ರಕರಣ ದಾಖಲಿಸಲಾಗಿದೆ. ಆದರೆ, ಎಫ್‌ಐಆರ್‌ನಲ್ಲಿ ಯಾವ ಅಧಿಕಾರಿಗಳ ಹೆಸರನ್ನೂ ಉಲ್ಲೇಖಿಸಿಲ್ಲ.


Spread the love

About Laxminews 24x7

Check Also

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Spread the loveಬೆಂಗಳೂರು:  ಸುರಿದ ಭಾರೀ ಮಳೆಗೆ ನಡೆದ ಅವಾಂತರಗಳು ಒಂದಾ.. ಎರಡಾ..? ಬೇಸಿಗೆ ಮಳೆಗೆ ಇಡೀ ಸಿಲಿಕಾನ್ ಸಿಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ