ಹಾವೇರಿ: ಕಳೆದ ಎರಡು ತಿಂಗಳಿಂದ ಬಿಸಿಲಿನ ತೀವ್ರತೆ, ಮಳೆ ಕೊರತೆಯಿಂದ ತರಕಾರಿ ನಿರೀಕ್ಷಿತ ಮಟ್ಟದಲ್ಲಿ ಮಾರುಕಟ್ಟೆಗೆ ಪೂರೈಕೆಯಾಗುತ್ತಿಲ್ಲ.
ಹೀಗಾಗಿ ತರಕಾರಿ ದರ ಏರಿಕೆ ಕಂಡಿದ್ದು, ಗ್ರಾಹಕರ ಜೇಬಿಗೆ ಬಿಸಿ ತಟ್ಟುವಂತಾಗಿದೆ. ಸ್ಥಳೀಯ ಬಸವೇಶ್ವರ ನಗರದಲ್ಲಿ ರವಿವಾರ ನಡೆದ ತರಕಾರಿ ಸಂತೆಯಲ್ಲಿ ದರ ಏರಿಕೆ ಬಿಸಿ ಜನಸಾಮಾನ್ಯರಿಗೆ ಶಾಕ್ ನೀಡಿತು.