Breaking News

ದೇವರಾಜೇಗೌಡ 3 ದಿನ ಪೊಲೀಸ್‌ ಕಸ್ಟಡಿಗೆ

Spread the love

ಹಾಸನ: ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಮುಖಂಡ, ವಕೀಲ ದೇವರಾಜೇ ಗೌಡ ಅವರನ್ನು ಮೂರು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಿ ಹೊಳೆನರಸೀಪುರದ ಜೆಎಂಎಫ್ಸಿ ನ್ಯಾಯಾಲಯ ಆದೇಶಿಸಿದೆ.

ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ತಮ್ಮ ಕಸ್ಟಡಿಗೆ ನೀಡುವಂತೆ ಹೊಳೆನರಸೀಪುರ ನಗರ ಠಾಣೆ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಧೀಶರು ಮಂಗಳವಾರದಿಂದ ಗುರುವಾರದ ವರೆಗೆ ಪೊಲೀಸ್‌ ಕಸ್ಟಡಿಗೆ ನೀಡಿ ಆದೇಶಿಸಿದರು.

Hassan ದೇವರಾಜೇಗೌಡ 3 ದಿನ ಪೊಲೀಸ್‌ ಕಸ್ಟಡಿಗೆ

ಮೇ 11ರಂದು ದೇವರಾಜೇಗೌಡ ಅವರನ್ನು ಬಂಧಿಸಿದ್ದ ಹೊಳೆನರಸೀಪುರ ನಗರ ಠಾಣೆ ಪೊಲೀಸರು ಅಂದು ರಾತ್ರಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಧೀಶರು ಆರೋಪಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೊಪ್ಪಿಸಿ ಆದೇಶ ಹೊರಡಿಸಿದ್ದರು. ಆದರೆ ಪ್ರಕರಣದಲ್ಲಿ ಹೆಚ್ಚಿನ ವಿಚಾರಣೆ ಅಗತ್ಯವಿದೆ. ಹಾಗಾಗಿ ಆರೋಪಿಯನ್ನು ಕಸ್ಟಡಿಗೆ ಒಪ್ಪಿಸಬೇಕು ಎಂದು ಪ್ರಾಸಿಕ್ಯೂಷನ್‌ ಪರ ವಕೀಲರು ಹೊಳೆನರಸೀಪುರ ಜೆಎಂಎಫ್ಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅದನ್ನು ನ್ಯಾಯಾಲಯ ಪುರಸ್ಕರಿಸಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ