ಬೆಂಗಳೂರು : ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ ಅವರನ್ನು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಇಂದು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಗಳು ಹಾಗೂ ಹಿರಿಯ ನಾಯಕ ಬಿ.ಎಲ್ ಸಂತೋಷ್ ಅವರಿಗೆ ಕಳೆದ ಆರು ತಿಂಗಳಿನಲ್ಲಿ ಜಲಸಂಪನ್ಮೂಲ ಇಲಾಖೆಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ಕುರಿತು ವಿವರಿಸಿದರು. ಜತೆಗೆ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಸಮಾಲೋಚನೆ ನಡೆಸಿದರು.
Laxmi News 24×7