ಮುಂಬಯಿ: ಕಳೆದ ಏಪ್ರಿಲ್‌ನಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಬಳಿ ನಡೆದ ಗುಂಡಿನ ದಾಳಿ ಪ್ರಕರಣ ಮುಂಬೈ ಹಾಗೂ ಬಾಲಿವುಡ್ ಅಭಿಮಾನಿಗಳನ್ನು ಬೆಚ್ಚಿ ಬೀಳಿಸಿತ್ತು. ಏಪ್ರಿಲ್ 14 ರಂದು ನಡೆದ ಈ ಘಟನೆಯಿಂದ ಮುಂಬೈ ಪೊಲೀಸ್ ಕ್ರೈಂ ಬ್ರಾಂಚ್ ಈ ಪ್ರಕರಣವನ್ನು ನಿರಂತರವಾಗಿ ತನಿಖೆ ನಡೆಸುತ್ತಿದೆ, ಇದೀಗ ಈ ಪ್ರಕರಣದಲ್ಲಿ ಪೊಲೀಸರಿಗೆ ಮತ್ತೊಂದು ಯಶಸ್ಸು ಸಿಕ್ಕಿದೆ.
ಮುಂಬೈ ಪೊಲೀಸರು ಸಲ್ಮಾನ್ ಖಾನ್ ಮನೆಯ ಹೊರಗೆ ಗುಂಡು ಹಾರಿಸಿದ ಪ್ರಕರಣದ ಆರನೇ ಆರೋಪಿಯನ್ನು ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ಪ್ರಕರಣದ ಐದನೇ ಆರೋಪಿ ರಾಜಸ್ಥಾನ ಮೂಲದ ಮೊಹಮ್ಮದ್ ಚೌಧರಿಯನ್ನು ಪೊಲೀಸರು ಬಂಧಿಸಿದ್ದರು.
ಹರ್ಯಾಣದಲ್ಲಿ ಬಂಧನ:
ಸಲ್ಮಾನ್ ಮನೆಗೆ ಗುಂಡು ಹಾರಿಸಿದ ಪ್ರಕರಣದಲ್ಲಿ ಮುಂಬೈ ಪೊಲೀಸರು ಆರನೇ ಆರೋಪಿಯನ್ನು ಹರ್ಯಾಣದಲ್ಲಿ ಬಂಧಿಸಿದ್ದಾರೆ. ಬಂಧಿತನ ಹೆಸರು ಹರ್ಪಾಲ್ ಸಿಂಗ್ ಎನ್ನಲಾಗಿದೆ.
ಈ ಪ್ರಕರಣದಲ್ಲಿ ಪಂಜಾಬ್ ಮೂಲದ ಇಬ್ಬರು ಆರೋಪಿಗಳನ್ನು ಪೊಲೀಸರು ಮೊದಲು ಬಂಧಿಸಿದ್ದರು. ಆ ನಂತರ ಇಬ್ಬರು ಆರೋಪಿಗಳು ಗುಜರಾತ್‌ನ ಭುಜ್‌ನಲ್ಲಿ ಸಿಕ್ಕಿಬಿದ್ದರು. ಈಗ ರಾಜಸ್ಥಾನ ಮತ್ತು ಹರ್ಯಾಣದಿಂದ ಟಾಲಾ ಒಬ್ಬರನ್ನು ಬಂಧಿಸಲಾಗಿದೆ. ಬಂಧಿತರ ಸಂಖ್ಯೆ ನೋಡುವಾಗ ಪ್ರಕರಣ ಎಷ್ಟು ದೊಡ್ಡ ಮಟ್ಟದಲ್ಲಿದೆ ಎಂಬುದನ್ನು ಗಮನಿಸಬಹುದು.