ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್‌ಐಟಿ ಅಧಿಕಾರಿಗಳು ಹಾಸನದ ಎರಡು ಕಡೆ ದಾಳಿ ನಡೆಸಿದ್ದಾರೆ.
ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಅವರ ಆಪ್ತರಾದ ಶರತ್ ಹಾಗೂ ಕಿರಣ್ ಒಡೆತನದ ಹೋಟೆಲ್, ಬಾರ್ ಗಳ ಮೇಲೆ ಎಸ್‌ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಶರತ್ ಒಡೆತನದ ಕ್ವಾಲಿಟಿ ಬಾರ್ ಹಾಗೂ ಕಿರಣ್ ಒಡೆತನದ ಶ್ರೀಕೃಷ್ಣ ಹೋಟೆಲ್ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
Laxmi News 24×7