Breaking News

ಸರಕಾರದ ನಿರ್ಧಾರ ಖಂಡಿಸಿ ಡಿಸೆಂಬರ್ 5ಕ್ಕೆ ಕರ್ನಾಟಕ ಬಂದ್‍ಗೆ ಕರೆ

Spread the love

ಬೆಂಗಳೂರು : ಮರಾಠ ಅಭಿವೃಧಿ ಪ್ರಾಧಿಕಾರ ರಚನೆ ಖಂಡಿಸಿ ಇಂದು ವಾಟಲ್ ನಾಗರಾಜ್ ಹಾಗೂ ಕನ್ನಡ ಪರ ಸಂಘಟನೆಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸರಕಾರದ ನಿರ್ಧಾರವನ್ನು ಖಂಡಿಸಿ ಡಿಸೆಂಬರ್ 5ಕ್ಕೆ ಕರ್ನಾಟಕ ಬಂದ್‍ಗೆ ಕರೆ ನೀಡಿ ಬೆಂಬಲ ಸೂಚಿಸಲಾಯಿತು.

ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರದ ವಿರುದ್ಧ ರಾಜ್ಯಾದ್ಯಂತ ತೀವ್ರ ಆಕ್ರೋಶ ವಿರೋಧ ವ್ಯಕ್ತವಾಗುತ್ತಿದ್ದು, ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಮಾಡಲಾಗುವುದು ಎಂದು ಕನ್ನಡ ಪರ ಸಂಘಟನೆಗಳು ಈ ಹಿಂದೆ ಸರಕಾರಕ್ಕೆ ಎಚ್ಚರಿಕೆ ನೀಡಿದ್ದವು.

ಅದರಂತೆ ಇಂದು ಒಮ್ಮತದಿಂದ ಎಲ್ಲಾ ಕನ್ನಡ ಪರ ಹೋರಾಟಗಾರರು ಹಾಗೂ ಕನ್ನಡ ಸಂಘಟನೆಗಳು ಡಿಸೆಂಬರ್ 5ಕ್ಕೆ ಕರ್ನಾಟಕ ಬಂದ್‍ಗೆ ಕರೆ ನೀಡಿ ಬೆಂಬಲ ಸೂಚಿಸಿವೆ.
ಮರಾಠಿ ಪ್ರಾಧಿಕಾರ ರಚನೆಯಿಂದ ಕನ್ನಡಿಗರಿಗೆ ಅನ್ಯಾಯ ಮಾಡಲಾಗಿದೆ. ಹೀಗಾಗಿ ಈ ಕೂಡಲೇ ಯಡಿಯೂರಪ್ಪ ರಾಜೀನಾಮೆ ನೀಡಬೇಕು, ಜೊತೆಗೆ ಮರಾಠಿ ಪ್ರಾಧಿಕಾರ ರಚನೆಯ ಹಿಂದೆ ಭಾರಿ ಪಿತೂರಿ ಮಾಡಲಾಗಿದೆ ಎಂದು ಆರೋಪಿದ್ದರು.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ