ಮೈಸೂರು: ಈ ಬಾರಿಯ ಎಸ್‌ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಕೊಣ್ಣೂರ, ತೃತೀಯ ಸ್ಥಾನ ಪಡೆದ ಮಂಡ್ಯದ ತುಂಬಕೆರೆ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ನವನೀತ್ ಅವರನ್ನು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.
ಮಹದೇವಪ್ಪ ಸನ್ಮಾನಿಸಿದರು.
ಅವರ ಉನ್ನತ ವ್ಯಾಸಂಗಕ್ಕಾಗಿ ಸರ್ಕಾರದಿಂದ ಎಲ್ಲ ರೀತಿಯ ನೆರವನ್ನೂ ನೀಡುವುದಾಗಿ ತಿಳಿಸಿದರು.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ಅಧಿಕಾರಿ ಪ್ರವೀಣ್ ಬಾಗೇವಾಡಿ, ಜಂಟಿ ನಿರ್ದೇಶಕ ನಾಗೇಶ್, ಸಹಾಯ ನಿರ್ದೇಶಕ ಸಿ.ಎಂ. ಹೊನ್ನರಾಜು ಹಾಗೂ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.
Laxmi News 24×7