Breaking News

ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇಕೇ..? ಇಲ್ಲಿದೆ ನೋಡಿ ಮಾಹಿತಿ

Spread the love

ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸುವವರಿಗೆ ಆಹಾರ ಇಲಾಖೆ ಮುಖ್ಯವಾದ ಮಾಹಿತಿ ನೀಡಿದೆ. ಬೆಂಗಳೂರು ಒನ್, ಗ್ರಾಮ ಒನ್ ಸೇವಾ ಕೇಂದ್ರಗಳ ಮೂಲಕ, ಸಲ್ಲಿಸುವ ಹೊಸ ಅರ್ಜಿಗಳನ್ನು ಮಾತ್ರ ಪರಿಗಣಿಸಲು ಆಹಾರ ಇಲಾಖೆ ನಿರ್ಧರಿಸಿದೆ.

ಸೈಬರ್ ಕೇಂದ್ರಗಳು ಹೊಸ ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸುವವರಿಂದ ಹೆಚ್ಚು ಹಣ ಪಡೆಯುತ್ತಿದ್ದಾರೆ.

ಈ ಕಾರಣಕ್ಕಾಗಿ ಆಹಾರ ಇಲಾಖೆ ಈ ನಿರ್ಧಾರಕ್ಕೆ ಬಂದಿದ್ದು, ಸೈಬರ್ ಕೇಂದ್ರಗಳು ತಿದ್ದುಪಡಿ ಮಾಡಿದ ಪಡಿತರ ಚೀಟಿಯನ್ನು ನಿರ್ಬಂಧಿಸಲು ಆಹಾರ ಇಲಾಖೆ ನಿರ್ಧರಿಸಿದೆ. ಜೂನ್ ಮೊದಲ ವಾರದಲ್ಲಿ ಹೊಸ ಪಡಿತರ ತಿದ್ದುಪಡಿಗೆ ಅವಕಾಶ ನೀಡಲಾಗಿದ್ದು, ಬೇಕಾದ ದಾಖಲೆಗಳನ್ನು ಸಿದ್ಧಪಡಿಸಿ ಇಡುವಂತೆ ಸೂಚಿಸಲಾಾಗಿದೆ.

ahar.kar.nic.in ಜಾಲತಾಣದ ಮೂಲಕ ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೊಸ ಪಡಿತರ ಚೀಟಿ ಬೇಕಾಗಿದ್ದಲ್ಲಿ, ಅಥವಾ ಪಡಿತರ ಚೀಟಿಯಲ್ಲಿ ಹೆಸರು ಸೇರಿಸಬೇಕು ಎಂದಲ್ಲಿ, ಅರ್ಜಿ ಸಲ್ಲಿಸಬಹುದಾಗಿದೆ.

ವೋಟರ್ ಐಡಿ, ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ವಯಸ್ಸಿನ ಪ್ರಮಾಣಪತ್ರ, ಪಾಸ್‌ಪೋರ್ಟ್‌ ಸೈಜ್ ಫೋಟೋ, ಮೊಬೈಲ್ ಸಂಖ್ಯೆ ಇವಿಷ್ಟು ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಬೇಕಾಗಿರುವ ಪ್ರಮುಖ ದಾಖಲೆಗಳು,


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ