Breaking News

ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು ನುಂಗಲಿ

Spread the love

ಬೆಂಗಳೂರು: ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು ನುಂಗಲಿ. ಆದರೆ ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ನನ್ನ ಒಂದು ಸಣ್ಣ ಹಸ್ತಕ್ಷೇಪವಿದ್ದರೂ ಅದಕ್ಕೆ ಬೆಲೆ ತೆರಲು ನಾನು ಸಿದ್ಧ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬೇರೆಯವರಿಂದ ಮಾತನಾಡಿಸುವ, ಪ್ರತಿಭಟನೆ ಮಾಡಿಸುವ, ಬೇರೆಯವರ ಮೇಲೆ ಅನಗತ್ಯ ಆರೋಪ ಮಾಡುವ ಅಗತ್ಯ ನನಗಿಲ್ಲ.

ನಾನು ಚುನಾವಣಾ ಪ್ರಚಾರದಲ್ಲಿ ನಿರತನಾಗಿದ್ದೇನೆ. ನಾನು ರಾಜಕೀಯ ಪಕ್ಷದ ಅಧ್ಯಕ್ಷ. ಈ ಪ್ರಕರಣದಲ್ಲಿ ಒಂದು ಸಣ್ಣ ಹಸ್ತಕ್ಷೇಪವಿದ್ದರೂ ಅದಕ್ಕೆ ಬೆಲೆ ತೆರಲು ನಾನು ಸಿದ್ಧ. ಈಗ ಆ ವಿಚಾರವಾಗಿ ನಾನು ಮಾತನಾಡುವುದಿಲ್ಲ. ಸಮಯ ಎಲ್ಲದಕ್ಕೂ ಉತ್ತರ ನೀಡಲಿದೆ ಎಂದು ಸೂಚ್ಯವಾಗಿ ಹೇಳಿದರು.D. K. Shivakumar ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು ನುಂಗಲಿ

ಪೆನ್‌ಡ್ರೈವ್‌ ವಿಚಾರದಲ್ಲಿ ಈ ಹಿಂದೆ ಮಹಾನಾಯಕ ಅಂತ ಟೀಕೆ ಮಾಡಿದ್ದ ಕುಮಾರಸ್ವಾಮಿ ಅವರು ಇಂದು ತಮ್ಮನ್ನು ತಿಮಿಂಗಿಲ ಅಂತ ಜರಿದಿದ್ದಾರೆ ಎಂದಾಗ, ಅವರಿಗೆ ಯಾರನ್ನು ಹಿಡಿದು ಬಡಿದು ಒಳಗೆ ಹಾಕಬೇಕು ಅನ್ನಿಸುತ್ತದೋ, ಅವರನ್ನು ಒಳಗೆ ಹಾಕಿಸಲಿ. ತಿಮಿಂಗಿಲಗಳನ್ನು ಅವರೇ ನುಂಗಿಕೊಳ್ಳಲಿ. ನಾನು ನಿರ್ದೇಶಕನೂ ಅಲ್ಲ, ನಿರ್ಮಾಪಕನೂ ಅಲ್ಲ. ನಾನು ಪ್ರದರ್ಶಕ ಅಷ್ಟೇ ಎಂದು ಸ್ಪಷ್ಟಪಡಿಸಿದರು.


Spread the love

About Laxminews 24x7

Check Also

ಅಕ್ರವಾಗಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಬೆಳಗಾವಿ ಪೊಲೀಸರು ದಾಳಿ ನಡೆಸಿ 12 ಆರೋಪಿಗಳನ್ನು ಬಂಧಿಸಿದ್ದಾರೆ.

Spread the loveಅಕ್ರವಾಗಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಬೆಳಗಾವಿ ಪೊಲೀಸರು ದಾಳಿ ನಡೆಸಿ 12 ಆರೋಪಿಗಳನ್ನು ಬಂಧಿಸಿದ್ದಾರೆ. ನಂದಿಹಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ