Breaking News

ಕರೆಂಟ್ ಶಾಕ್ ಪ್ರಕರಣ;ಖಂಡಿಸಿ ಹಿಂದೂ ಜಾಗೃತಿ ಸೇನೆಯಿಂದ ಸರಕಾರದ ಪ್ರತಿಕೃತಿ ದಹನ

Spread the love

ಲಬುರಗಿ: ನಗರದಲ್ಲಿ ಮಂಗಳವಾರ ಬೆಳಗ್ಗೆ ಹಿಂದೂ ಜಾಗೃತಿ ಸೇನೆಯ ಕಾರ್ಯಕರ್ತರು ಸರ್ದಾರ್ ವಲ್ಲಭಾಯಿ ಪಟೇಲ್ ವೃತ್ತದಲ್ಲಿ ಜಮಾವಣೆಗೊಂಡು ಜಿಲ್ಲೆಯ ಸೇಡಂ ತಾಲೂಕಿನ ದೇವನೂರು ಗ್ರಾಮದ ನಿವಾಸಿ ಅರ್ಜುನಪ್ಪ ಹನುಮಂತ್ ಬಡಿವಾಳ್ ಎಂಬ ಯುವಕ ಯುವಕನನ್ನು ಕೂಡಿಹಾಕಿ 10 ಲಕ್ಷ ಹಣಕ್ಕೆ ಬೇಡಿಕೆ ಇಟ್ಟು ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಘಟನೆ ಖಂಡಿಸಿ ಮಾನವ ಸರಪಳಿ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಸರ್ಕಾರದ ಪ್ರತಿ ಕೃತಿ ದಹನ ಮಾಡಿದರು.

 

ಈ ವೇಳೆ ಮಾತನಾಡಿದ ಹಿಂದೂ ಜಾಗೃತಿ ಸೇನೆಯ ಹಿಂದೂ ಜಾಗೃತಿ ಸೇನೆಯ ಜಿಲ್ಲಾಧ್ಯಕ್ಷ ಲಕ್ಷ್ಮಿಕಾಂತ್ ಸ್ವಾದಿ, ಮೇ 5 ರಂದು ಚಿತ್ತಾಪುರದ ರಮೇಶ್ ದೊಡ್ಮನಿ ಎನ್ನುವ ವ್ಯಕ್ತಿ ತನಗೊಂದು ಸೆಕೆಂಡ್ ಹ್ಯಾಂಡ್ ಕಾರು ಬೇಕು ಅಂತ ಹೇಳಿ ಅರ್ಜುನಪ್ಪನ ಜೊತೆಗೆ ವ್ಯವಹಾರ ಮಾಡುತ್ತಾನೆ. ಬಳಿಕ ಹಣ ಕೊಡಲು ಆತನನ್ನು ಕರೆಸಿಕೊಂಡು ಮನೆಯೊಂದರಲ್ಲಿ ಕೂಡಿಹಾಕಿ ಹಲವಾರು ಜನರು ಗಾಂಜಾ ನಶೆಯಲ್ಲಿ ಅರ್ಜುನಪ್ಪನ ಹಾಗೂ ಆತನ ಸಹಚರರ ಮೇಲೆ ಹಲ್ಲೆ ಮಾಡಿದ್ದಾರೆ. ಅಲ್ಲದೆ ರೂಮಿನಲ್ಲಿ ಕೂಡಿಹಾಕಿ ಬೆತ್ತಲೆಗೊಳಿಸಿ ವಿದ್ಯುತ್ ಶಾಕ್ ನೀಡಿದ್ದಾರೆ. ಅಷ್ಟು ಮಾತ್ರವಲ್ಲದೇ ಶಾಕ್ ನೀಡಿರುವ ಘಟನೆ ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣಗಳಿಗೆ ಬಿಡುಗಡೆಯೂ ಮಾಡಿದ್ದಾರೆ. ಇದು ಜಿಲ್ಲೆಯಲ್ಲಿ ನಡೆಯುತ್ತಿರುವ ವಿಕೃತಿಯಾಗಿದ್ದು ಇದನ್ನು ತಡೆಯುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಇತ್ತೀಚಿಗೆ ಹಲವಾರು ಹಲ್ಲೆ ಘಟನೆಗಳು ನಡೆದಿದೆ. ಆದರೂ ಕೂಡ ಜಿಲ್ಲಾಡಳಿತ ಮೌನಕ್ಕೆ ಜಾರಿದೆ. ಜಿಲ್ಲಾ ಪೊಲೀಸ್ ಅಧಿಕಾರಿ ಹಾಗೂ ಉಸ್ತುವಾರಿ ಸಚಿವರು ಸಂಪೂರ್ಣ ನಿಷ್ಕ್ರಿಯರಾಗಿದ್ದಾರೆ. ಕೂಡಲೇ ರಮೇಶ್ ದೊಡ್ಡಮನಿ ಹಾಗೂ ಗ್ಯಾಂಗ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಅಕ್ರವಾಗಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಬೆಳಗಾವಿ ಪೊಲೀಸರು ದಾಳಿ ನಡೆಸಿ 12 ಆರೋಪಿಗಳನ್ನು ಬಂಧಿಸಿದ್ದಾರೆ.

Spread the loveಅಕ್ರವಾಗಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಬೆಳಗಾವಿ ಪೊಲೀಸರು ದಾಳಿ ನಡೆಸಿ 12 ಆರೋಪಿಗಳನ್ನು ಬಂಧಿಸಿದ್ದಾರೆ. ನಂದಿಹಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ