Breaking News

KPSC: ಗಮನಿಸಿ ಕೆಪಿಎಸ್‌ಸಿ ನೇಮಕಾತಿಯಲ್ಲಿ 2 ಮಹತ್ವದ ಬದಲಾವಣೆ

Spread the love

ಬೆಂಗಳೂರು, ಮೇ 15: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನೇಮಕಾತಿಯಲ್ಲಿ ಎರಡು ಬದಲಾವಣೆ ಮಾಡಿದೆ. ಈಗಾಗಲೇ ಹೊರಡಿಸಿರುವ ನೇಮಕಾತಿ ಅಧಿಸೂಚನೆಯಲ್ಲಿ ಈ ಬದಲಾವಣೆ ಆಗಿದ್ದು, ಅಭ್ಯರ್ಥಿಗಳು ಗಮನಿಸಬಹುದು.

ಈ ಕುರಿತು ಫ್ಯಾನೇಂದ್ರ ಕುಮಾರ್ ಗಂಗ್ವಾರ್, ಪರೀಕ್ಷಾ ನಿಯಂತ್ರಕರು ಹಾಗೂ ಕಾರ್ಯದರ್ಶಿ (ಪ್ರ), ಕರ್ನಾಟಕ ಲೋಕ ಸೇವಾ ಆಯೋಗ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ.ದಿನಾಂಕ15/03/2024ರಂದು ಹೊರಡಿಸಿರುವ ಅಧಿಸೂಚನೆಯಲ್ಲಿ ಈ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.

ಬದಲಾವಣೆ ವಿವರ: ಆಯೋಗದಿಂದ ಕಾಲ ಕಾಲಕ್ಕೆ ತಿದ್ದುಪಡಿಯಾದ ಕರ್ನಾಟಕ ನಾಗರೀಕ ಸೇವೆಗಳು (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021 ಹಾಗೂ ತಿದ್ದುಪಡಿ ನಿಯಮ 2022ರನ್ವಯ ಉಳಿಕೆ ಮೂಲ ವೃಂದದ ವಿವಿಧ ಗ್ರೂಪ್ ‘ಸಿ’ ಹುದ್ದೆಗಳನ್ನು ಅಧಿಸೂಚನೆ ಸಂಖ್ಯೆ ಪಿಎಸ್‌ಸಿ 503 ಆರ್‌ಟಿಬಿ(2)/2023-24/3494, ದಿನಾಂಕ 15-03-2024 ರಂದು ಅಧಿಸೂಚನೆಯನ್ನು ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ ಎಂದು ಹೇಳಿದೆ.


Spread the love

About Laxminews 24x7

Check Also

DCM ಡಿ.ಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ : ಸುಪ್ರೀಂಕೋರ್ಟ್’ಗೆ ಅರ್ಜಿ ಸಲ್ಲಿಸಿದ CBI

Spread the love ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ