Breaking News

ಸಿಎಸ್ ಆರ್ ಅನುದಾನ ಅಡಿಯಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿ: ಡಿಸಿಎಂ ಡಿ ಕೆ ಶಿವಕುಮಾರ್

Spread the love

ಬೆಂಗಳೂರು: ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಅಧ್ಯಯನ ಮಾಡಿರುವ ಟಾಪರ್‌ಗಳನ್ನು ಬೆಂಗಳೂರಿನಲ್ಲಿ ನಿನ್ನೆ ಮಂಗಳವಾರ ಸನ್ಮಾನಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ರಾಜ್ಯದ ಅನುದಾನವನ್ನು ಅವಲಂಬಿಸದೆ ಸರ್ಕಾರಿ ಶಾಲೆಗಳನ್ನು ಸಿಎಸ್‌ಆರ್ ಅಡಿಯಲ್ಲಿ ಅಭಿವೃದ್ಧಿಪಡಿಸುವ ಯೋಜನೆಯಿದೆ ಎಂದು ಹೇಳಿದರು.

ಸಿಎಸ್ ಆರ್ ಅನುದಾನ ಅಡಿಯಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿ: ಡಿಸಿಎಂ ಡಿ ಕೆ ಶಿವಕುಮಾರ್

ಎಸ್‌ಎಸ್‌ಎಲ್‌ಸಿ ಟಾಪರ್‌ಗಳಾದ ಪ್ರಥಮ ರ್ಯಾಂಕ್ ಪಡೆದ ಅಂಕಿತಾ ಮತ್ತು ತೃತೀಯ ರ್ಯಾಂಕ್ ಪಡೆದ ನವನೀತ್ ಅವರಿಗೆ ಕ್ರಮವಾಗಿ 5 ಲಕ್ಷ ಮತ್ತು 2 ಲಕ್ಷ ರೂಪಾಯಿಗಳನ್ನು ನೀಡಿ ಸನ್ಮಾನಿಸಿ ಮಾತನಾಡಿದ ಅವರು, ರಾಮನಗರ ಜಿಲ್ಲೆಯ 20 ಸರ್ಕಾರಿ ಶಾಲೆಗಳ ಕಾಮಗಾರಿ ಆರಂಭವಾಗಿದೆ. ಸಿಎಸ್‌ಆರ್ ನೆರವಿನ ಅಡಿಯಲ್ಲಿ ಅಭಿವೃದ್ಧಿಪಡಿಸಿದ ಶಾಲೆಗಳ ಮೂಲಕ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅಂತಾರಾಷ್ಟ್ರೀಯ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದರು.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ